ಲೋಕಸಭಾ ಚುನಾವಣೆ : ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸಿಪಿಐಎಂ ಸ್ಪರ್ಧೆ

ಚಿಕ್ಕಬಳ್ಳಾಪುರ : 18ನೇ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ)ಯು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಸಿಪಿಐಎಂ

ಮಾರ್ಚ್ 21, 2024 ರಂದು ಮೊದಲ ಸುತ್ತಿನಲ್ಲಿ 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಸಿಪಿಐಎಂ ಪಾಲಿಟ್ ಬ್ಯುರೋ ಕರ್ನಾಟಕದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸ್ಪರ್ಧೆಯನ್ನು ಘೋಷಿಸಿದೆ. ತನ್ನ ಅಭ್ಯರ್ಥಿಯನ್ನಾಗಿ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ, ಚಿಕ್ಕಬಳ್ಳಾಪುರ ಜಿಲ್ಲಾ ಸಮಿತಿಯ ಕಾರ್ಯದರ್ಶಿಯೂ ಆಗಿರುವ ಎಂ. ಪಿ. ಮುನಿವೆಂಕಟಪ್ಪನವರನ್ನು ತನ್ನ ಹುರಿಯಾಳು ಎಂದು ಘೋಷಿಸಿದೆ.

ಇದನ್ನು ಓದಿ : 19 ಕೋಟಿ ಜನರು ಹಸಿವಿನಿಂದ ಬಳಲುತ್ತಿರುವ ದೇಶದಲ್ಲಿ, ತಾತನಿಂದ ಮೊಮ್ಮಗನಿಗೆ 240 ಕೋಟಿ ಉಡುಗೊರೆ

ಲೋಕಸಭಾ ಚುನಾವಣೆಯನ್ನು ಎದುರಿಸಲು ಸಿದ್ಧತೆಗಳು ಈಗಾಗಲೇ ಕ್ಷೇತ್ರದಲ್ಲಿ ಆರಂಭಗೊಂಡಿವೆ. ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ನಾವು ಉತ್ತಮ ಮತ ಪಡೆದಿದ್ದೇವೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪ್ರಭಾವ ಹೆಚ್ಚು ಇದೆ. ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗೆ ತೀವ್ರ ಪೈಪೋಟಿ ನೀಡಲಿದ್ದೇವೆ ಎಂದು ರಾಜ್ಯ ಕಾರ್ಯದರ್ಶಿ ಯು. ಬಸವರಾಜ ತಿಳಿಸಿದ್ದಾರೆ.

ಈಗಾಗಲೇ ಕ್ಷೇತ್ರದಲ್ಲಿ ಸಾಕಷ್ಟು ತಯಾರಿ, ಚುನಾವಣಾ ಸಿದ್ದತೆಗಳು ನಡೆದಿವೆ. ಮುನಿವೆಂಕಟ್ಟಪ್ಪ 1994 ರಿಂದ ಚುನಾವಣೆ ನೇತೃತ್ವವಹಿಸಿ, ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಲೋಕಸಭಾ ಕ್ಷೇತ್ರದ ಎಲ್ಲಾ ಕಡೆಗಳನ್ನು ನಮ್ಮ ಪಕ್ಷದ ಸದಸ್ಯರಿದ್ದು ಬೂತ್‌ ಮಟ್ಟದ ಪ್ರಚಾರಗಳು ನಡೆಯುತ್ತಿವೆ ಎಂದು ಜಿಲ್ಲಾ ಮುಖಂಡ ರಘುರಾಮ್‌ ರೆಡ್ಡಿ ತಿಳಿಸಿದ್ದಾರೆ.

ಇದನ್ನು ನೋಡಿ : ದ್ವೇಷ ಭಾಷಣ ದೂರು ದಾಖಲಿಸುವುದು ಹೇಗೆ? – ವಿನಯ್‌ ಶ್ರೀನಿವಾಸ ವಿಶ್ಲೇಷಣೆ Janashakthi Media

Donate Janashakthi Media

Leave a Reply

Your email address will not be published. Required fields are marked *