ಬೆಂಗಳೂರು : ನಾಡಹಬ್ಬ ದಸರಾ ಉದ್ಘಾಟನೆಗೆ ಬಾನುಮುಷ್ತಾಕ್ ಆಯ್ಕೆಯನ್ನು ವಿರೋಧಿಸಿ ನಾಡ ಹಬ್ಬದಲ್ಲಿ ಧರ್ಮದ್ವೇಷ ರಾಜಕಾರಣ ಮಾಡುವ ಬಿ.ಜೆ.ಪಿ ಯ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿರುವ ಸಿ.ಪಿ.ಐ (ಎಂ) ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್ ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ, ಕನ್ನಡದ ಹೆಸರಾಂತ ಬರಹಗಾರ್ತಿ ಬಾನು ಮುಷ್ತಾಕ್ ಆಯ್ಕೆಯನ್ನು ಸಿ.ಪಿ.ಐ (ಎಂ) ಸ್ವಾಗತಿಸುತ್ತದೆ ಎಂದು ತಿಳಿಸಿದರು.
ಭಾರತೀಯ ಜನತಾ ಪಕ್ಷ ಎಂದಿನಂತೇ ಇಲ್ಲಿಯೂ ಧರ್ಮದ್ವೇಷ ರಾಜಕಾರಣ ಮಾಡುತ್ತಿರುವುದು ಖಂಡನೀಯವಾಗಿದೆ.ಕನ್ನಡ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡಿ, ನಾಡಿನ ಸೌಹಾರ್ದ ಪರಂಪರೆಯನ್ನು ಪ್ರೀತಿಸುವ, ಗೌರವಿಸುವ ಬಾನುಮುಷ್ತಾಕ್ ರವರ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಇದು ಕನ್ನಡದ ಕೀರ್ತಿಯನ್ನು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪಸರಿಸಿದೆ ಎಂದು ಹೆಳಿದರು.
ಇದನ್ನೂ ಓದಿ: JC ರಸ್ತೆಗೆ ವೈಟ್ ಟಾಪಿಂಗ್ 7 ತಿಂಗಳಾದರೂ ಮುಗಿಯದ ಕಾಮಗಾರಿ; ವಾಹನ ಸವಾರರು, ಪರದಾಟ
ಅವರು ಅಲ್ಪ ಸಂಖ್ಯಾತ ಮುಸ್ಲಿಂ ಸಮುದಾಯದವರು ಎಂಬ ಕಾರಣಕ್ಕೆ ಆಗಲೂ ಕನಿಷ್ಟ ಅಭಿನಂದನೆ ಸಲ್ಲಿಸುವ ಸೌಜನ್ಯ ತೋರದಿರುವ ಭಾರತೀಯ ಜನತಾ ಪಕ್ಷ ಈಗ ನಾಡಹಬ್ಬದಲ್ಲಿ ತನ್ನ ಕೋಮುವಾದೀ ರಾಜಕಾರಣವನ್ನು ಮುಂದೆ ಮಾಡುತ್ತಿದೆ ಎಂದು ದೂರಿದರು.
ಸಿ.ಪಿ.ಎಂ.ಪಕ್ಷವು ಕೋಮುವಾದದ ವಿರುದ್ಧ ನಡೆಸುವ ನಿರಂತರ ಹೋರಾಟದ ಭಾಗವಾಗಿಯೇ ಬಿ.ಜೆ.ಪಿ.ಯ ಈ ಧರ್ಮದ್ವೇಷ ರಾಜಕಾರಣವನ್ನು ವಿರೋಧಿಸುತ್ತದೆ. ಮತ್ತು ನಾಡ ಹಬ್ಬ ದಸರಾವನ್ನು ಈ ಹಿಂದೆ ಖ್ಯಾತ ಕವಿ ನಿಸಾರ್ ಅಹ್ಮದ್ ರವರು ಉದ್ಘಾಟನೆ ಮಾಡಿದ್ದರು. ದಸರಾ ಕನ್ನಡ ನಾಡಿನ ಹಬ್ಬವೇ ಹೊರತೂ ಹಿಂದುತ್ವ ವಾದಿಗಳ ಹಬ್ಬವಲ್ಲ ಎಂಬುದನ್ನು ಬಿ.ಜೆ.ಪಿ.ಯವರು ಅರ್ಥಮಾಡಿಕೊಂಡು ಕ್ಷುಲ್ಲಕ ರಾಜಕಾರಣವನ್ನು ಕೈಬಿಡಬೇಕೆಂದು ಒತ್ತಾಯಿಸುತ್ತದೆ ಎಂದರು.
ಇದನ್ನೂ ನೋಡಿ: ಧರ್ಮಸ್ಥಳ | ದೂರುದಾರರಿಗೆ ರಕ್ಷಣೆ – ಸಾಕ್ಷಿ ರಕ್ಷಣಾ ಸ್ಕೀಮ್ ಏನು ಹೇಳುತ್ತದೆ?Janashakthi Media
