ಪಕ್ಷದ ಎಲ್ಲ ಘಟಕಗಳಿಗೆ ಪ್ರತಿಭಟನೆಗೆ ಕರೆ
ದೇವನಹಳ್ಳಿ: ಕಳೆದ 1177 ದಿನಗಳಿಂದ ಶಾಂತಿಯುತವಾಗಿ ಬಲವಂತದ ಭೂಸ್ವಾಧೀನದ ವಿರುದ್ಧ ದೇವನಹಳ್ಳಿಯ 13 ಗ್ರಾಮಗಳ ರೈತರು ನಡೆಸಿದ ವಿವಿಧ ಮಾದರಿಯ ಹೋರಾಟಕ್ಕೆ ಸರಕಾರ ಕಿವಿಕೊಡದ ಕಾರಣದಿಂದಾಗಿ ಇಂದು ದೇವನಹಳ್ಳಿ ಸಂತೇ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹತ್ತಾರು ಸಂಘಟನೆಗಳ ಸಾವಿರಾರು ಜನ ಸೇರಿದ್ದರು. ಸಂಯುಕ್ತ
ಅನಿರ್ದಿಷ್ಟ ಕಾಲದ ಪ್ರತಿಭಟನೆಯ ಕರೆಗೆ ಭೂಸ್ವಾಧೀನ ವಿರೋಧಿ ಹೋರಾಟ ವೇದಿಕೆಯನ್ನು ಬೆಂಬಲಿಸಿ ಜೂನ್ 26ರಂದು ಸಂಯುಕ್ತ ಹೋರಾಟ ಕರ್ನಾಟಕ ಕರೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಕಾರ್ಮಿಕ ಸಂಘಟನೆಗಳ ನಾಯಕರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಇದನ್ನೂ ಓದಿ: “ನಿರಂಕುಶಾಧಿಕಾರಿಗಳಂತೆ ವರ್ತಿಸಿದ ಆಳರಸರಿಗೆ ಏನಾಯಿತು ಎಂಬುದನ್ನು ನೆನಪಿಸಿಕೊಳ್ಳೋಣ” : ಪಿಣರಾಯಿ ವಿಜಯನ್
ಸರಕಾರದಿಂದ ಭೂ ಸ್ವಾಧೀನದ ಆದೇಶವನ್ನು ಹಿಂತೆಗದುಕೊಳ್ಳುವ ವರೆಗೂ ಪ್ರತಿಭಟನೆ ಮುಂದುವರೆಸುವ ತೀರ್ಮಾನಕ್ಕೆ ಬರಲಾಗಿತ್ತು. ಇಡೀ ದಿನ ಶಾಂತಿಯುತವಾಗಿ ನಡೆದ ಹೋರಾಟದ ವೇದಿಕೆಗೆ ಸಂಜೆಯ ವೇಳೆಗೆ ಏಕಾಏಕಿ ನುಗ್ಗಿದ ಪೊಲೀಸರು 5 ಘಂಟೆಯ ನಂತರ ಪ್ರತಿಭಟನೆಗೆ ಅವಕಾಶವಿಲ್ಲ, ಪಟ್ಟಣದಲ್ಲಿ ಪ್ರತಿಭಟನೆ ಮಾಡುವ ಹಾಗಿಲ್ಲ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಮಾಡಿರೆಂದು ಹೇಳಿ ವೇದಿಕೆಯಲ್ಲಿ ಇರುವವರನ್ನು ಎಳೆದಾಡಿ ಬಂಧಿಸಿದ ರೀತಿ ಖಂಡನೀಯವಾಗಿದೆ.

ಸರಕಾರದ ರೈತ ವಿರೋಧಿ ಸಂವಿಧಾನದ ಹಕ್ಕುಗಳ ವಿರೋಧೀ ಅನ್ನಕ್ಕೆ ತತ್ವಾರಮಾಡುವ ಭೂ ಸ್ವಾಧೀನ ನೀತಿಗಳನ್ನು ಯಾವುದೇ ಕಾರಣಕ್ಕೂ ಮುಂದುವರೆಸಬಾರದೆAದು ಸಿ.ಪಿ.ಐ.(ಎಂ) ಪಕ್ಷ ಒತ್ತಾಯಿಸುತ್ತದೆ.
ನಮ್ಮ ಪಕ್ಷದ ಹಲವಾರು ಮುಖಂಡರುಗಳು ಮತ್ತು ಸಾಮೂಹಿಕ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಇತರ ಸಂಘಟನೆಗಳ ಮುಖಂಡರನ್ನು ಕಾರ್ಯಕರ್ತರನ್ನೂ ಬಂಧಿಸಿದ ಕ್ರಮವನ್ನು ವಿರೋಧಿಸಿ ದಿನಾಂಕ 26-06-2025 ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲು ಸಿ.ಪಿ.ಐ.(ಎಂ) ಕರ್ನಾಟಕ ರಾಜ್ಯ ಸಮಿತಿ ಕರೆನೀಡಿದೆ.
ಇದನ್ನೂ ನೋಡಿ: 50 ವರ್ಷ| ಆಂತರಿಕ ತುರ್ತುಪರಿಸ್ಥಿತಿಯ ಕರಾಳ ದಿನಗಳು | 25 ಜೂನ್ 1975
