ಸಿಪಿಐಎಂ ನಾಯಕ ಮುನೀರ್ ಕಾಟಿಪಳ್ಳ ಮತ್ತು ಹಿರಿಯ ಪತ್ರಕರ್ತ, ಚಿಂತಕ ಅಬ್ದುಲ್ ಸಲಾಮ್ ಪುತ್ತಿಗೆ ಮೇಲೆ ಎಫ್‌ಐಆರ್ – ಸಿಪಿಐಎಂ ತೀವ್ರ ಖಂಡನೆ

ಹಾಸನ :  ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮತ್ತು ಹಿರಿಯ ಪತ್ರಕರ್ತ, ಚಿಂತಕ ಅಬ್ದುಲ್ ಸಲಾಮ್ ಪುತ್ತಿಗೆ ಇವರ ವಿರುದ್ಧ ಪುತ್ತೂರು ವೈದ್ಯಕೀಯ ಸಂಘದ (ಐಎಂಎ) ಕಾರ್ಯದರ್ಶಿಯವರಿಂದ ನ್ಯಾಯಾಲಯದ ಮೂಲಕ ಎಫ್‌ಐಆರ್ ದಾಖಲಾತಿ ಹತಾಶೆಯ ಪರಮಾವಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಹಾಸನ ಜಿಲ್ಲಾ ಸಂಘಟನಾ ಸಮಿತಿ ತೀವ್ರವಾಗಿ ಟೀಕಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಹಾಸನ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಎಚ್‌.ಆರ್‌. ನವೀನ್‌ ಕುಮಾರ್‌,  ಕೆಲ ದಿನಗಳ ಹಿಂದೆ ಪುತ್ತೂರು ಆಸ್ಪತ್ರಯಲ್ಲಿ ಮುಸ್ಲಿಂ ಕುಟುಂಬ ವೈದ್ಯರ ನಡುವೆ ಮತ್ತು ಅಲ್ಲಿನ ಐಎಂಎ ಹಾಗೂ ಸಂಘಪರಿವಾರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿರುವ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಈ ಘಟನೆ ಬಗ್ಗೆ ಮುನೀರ್ ಕಾಟಿಪಳ್ಳ ನೀಡಿದ ಪ್ರತಿಕ್ರಿಯೆ ಹಾಗೂ ಖಂಡನೆಯನ್ನು ವಾರ್ತಾಭಾರತಿ ಪತ್ರಿಕೆ ಪ್ರಕಟಿಸಿತು. ಈ ಕುರಿತು ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಇದರ ಘಟಕ ಕಾರ್ಯದರ್ಶಿಯವರು ಪ್ರಾರಂಭದಲ್ಲಿ ಸ್ಥಳಿಯ ಪೊಲೀಸ್ ಠಾಣೆಗೆ ದೂರು ನೀಡಿ, ಅದರಲ್ಲಿ ಸತ್ಯಾಂಶ ಇಲ್ಲವೆಂದು ಹಿಂಬರಹ ನೀಡಿದ ಮೇಲೆ ಊಹಾ ಪೋಹ, ಇಲ್ಲಸಲ್ಲದ ಆರೋಪಗಳನ್ನು ಮಾಡಿ ವೈದ್ಯಕೀಯ ವೃತ್ತಿಯ ಘನತೆ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಖಾಸಾಗಿ ದೂರು ನೀಡಿ ಆ ಮೂಲಕ ತನ್ನ ಕುಕೃತ್ಯದ ಬೇಳೆ ಬೇಯಿಸುವ ಹುನ್ನಾರವನ್ನು ಸಿಪಿಐಎಂ ಬಲವಾಗಿ ವಿರೋಧಿಸುತ್ತದೆ. ಎಲ್ಲಾ ರೀತಿಯಿಂದಲೂ ಇದರ ವಿರುದ್ಧದ, ಕಾನೂನಾತ್ಮಕವಾಗಿ ಮತ್ತು ಸಂಘಟಿತ ಜನಾಂದೋಲನ, ಪ್ರತಿಭಟನೆಯನ್ನು ಬೆಂಬಲಿಸುತ್ತದೆ ಎಂದಿದ್ದಾರೆ.

ಸಂಘದ ಕಾರ್ಯದರ್ಶಿ ಡಾ. ಗಣೇಶ್ ಪ್ರಸಾದ್ ಬಗ್ಗೆ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಕೋಮು ವಿಷ ಬೀಜ ಬಿತ್ತುವ ಪ್ರವೃತ್ತಿಯ ವಿರುದ್ಧ ಜನರಲ್ಲಿ ವ್ಯಾಪಕ ಅಸಮಾಧಾನವಿದೆ. ವೈದ್ಯಕೀಯ ರಂಗವನ್ನು ಕೋಮುವಾದದಿಂದ ಮಲಿನಗೊಳಿಸುತ್ತಿರುವ ಶಕ್ತಿಗಳ ವಿರುದ್ಧ ಸಿಪಿಐಎಂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ದೃಢವಾದ ಹೋರಾಟ ನಡೆಸುತ್ತಾಬಂದಿದೆ. ಕೋಮು ಶಕ್ತಿಗಳೊಂದಿಗೆ ಪುತ್ತೂರು ವೈದ್ಯರ ಸಂಘದ ನಾಯಕತ್ವ ಹೊಂದಿರುವ ಅನೈತಿಕ ಮೈತ್ರಿಯನ್ನು ಬಹಿರಂಗಪಡಿಸಿದೆ. ಮುನೀರ್ ಕಾಟಿಪಳ್ಳರ ಮೇಲಿನ ದುರುದ್ದೇಶಪೂರಿತ ಎಫ್‌ಐಆರ್ ವಿರುದ್ಧ ಪ್ರತಿ ಕಾನೂನು ಸಮರ ನಡೆಸಲು ನಿರ್ಧರಿಸಿದೆ ಎಂದಿದ್ದಾರೆ.

ಇದನ್ನೂ ಓದಿ : ಸದಾ ಅಶಾಂತರಾಗಿದ್ದ ಶಾಂತರಸ

ಕೋಮುವಾದಿ ಮನೋಭಾವ ಹೊಂದಿರುವ ವೈದ್ಯರುಗಳ ಸಂಘದ ಪದಾಧಿಕಾರಿಗಳು ಮುನೀರ್ ಕಾಟಿಪಳ್ಳ ರವರು ನಡೆಸಿರುವ ಖಾಸಾಗಿ ಆಸ್ಪತ್ರೆಗಳ ವಿರುದ್ಧದ ನಿರಂತರ ಹೋರಾಟವನ್ನು ಸದೆ ಬಡಿಯಲು ಮತ್ತು ಪುತ್ತೂರು ಸಾರ್ವಜನಿಕ ಆಸ್ಪತ್ರೆಯ ಘಟನೆಗೆ ಸಂಬಂಧಿಸಿ ಕೋಮು ದ್ರುವೀಕರಣದ ಹೋರಾಟದಲ್ಲಿ ವೈದ್ಯರುಗಳ ಕಳಂಕ ಪೂರಿತ ಪಾತ್ರವನ್ನು ಬಹಿರಂಗಗೊಳಿಸಿರುವುದರ ವಿರುದ್ಧ ಈ ಸುಳ್ಳು ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವೈದ್ಯರ ಸಂಘಗಳು ವೈದ್ಯಕೀಯ ಕ್ಷೇತ್ರದ ಘನತೆಯನ್ನು ಅದರ ಆದರ್ಶಗಳನ್ನು ಎತ್ತಿ ಹಿಡಿಯುವ ಜವಾಬ್ದಾರಿಯನ್ನೂ ಹೊಂದಿದೆ. ಆದರೆ, ಪುತ್ತೂರು ಹಾಗೂ ಮಂಗಳೂರು ಘಟಕಗಳು ಈ ಕುರಿತು ಯಾವುದೇ ಸಂದರ್ಭದಲ್ಲಿ ಚಕಾರ ಎತ್ತಿದ್ದನ್ನು ಯಾರೂ ಕಂಡಿಲ್ಲ. ವೈದ್ಯಕೀಯ ಕ್ಷೇತ್ರದ ಕಾರ್ಪೊರೇಟೀಕರಣ ದ.ಕ.ಜಿಲ್ಲೆಯಲ್ಲಿ ಉಂಟು ಮಾಡಿರುವ ತಲ್ಲಣಗಳ ಕುರಿತು ಮಾತನಾಡುತ್ತಿರುವ ಮುನೀರ್ ಕಾಟಿಪಳ್ಳ ವಿರುದ್ಧ ಸಮರ ಸಾರಿರುವ ವೈದ್ಯರ ಸಂಘದ ಪ್ರಮುಖರು ಒಂದು ಹೇಳಿಕೆಯನ್ನು ಈವರಗೆ ನೀಡಿಲ್ಲ. ವೈದ್ಯಕೀಯ ಕ್ಷೇತ್ರದಿಂದ ತೊಂದರೆಗೊಳಗಾದ ಸಂತ್ರಸ್ತ ಜನತೆ ನ್ಯಾಯಕ್ಕಾಗಿ ಧ್ವನಿ ಎತ್ತುವುದನ್ನು ಹತ್ತಿಕ್ಕುವಲ್ಲಿ ವೈದ್ಯಕೀಯ ಸಂಘ ತೊಡಗಿದೆ ಎಂದು ಆರೋಪಿಸಿದ್ದಾರೆ.

 

ಇದನ್ನೂ ನೋಡಿ : ಪಿಚ್ಚರ್‌ ಪಯಣ 159 | ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮೂರು ಸಿನಿಮಾಗಳತ್ತ ಒಂದು ನೋಟ

Donate Janashakthi Media

Leave a Reply

Your email address will not be published. Required fields are marked *