ಬೆಂಗಳೂರು: ಪ್ರಸಕ್ತ ಚುನಾವಣೆ ನಡೆಯುತ್ತಿರುವ ತ್ರಿಪುರಾ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ದಬ್ಬಾಳಿಕೆಗಳು ನಡೆಯುತ್ತಿದೆ. ಆಡಳಿತ ಪಕ್ಷ ಬಿಜೆಪಿಯ ಗೂಂಡಾ ದಬ್ಬಾಳಿಯಿಂದಾಗಿ ಅಲ್ಲಿನ ಜನರ ಸ್ಥಿತಿ ಗಂಭೀರ ಸ್ಥಿತಿಗೆ ತಲುಪಿದೆ. ಅಲ್ಲಿನ ಜನತೆ ಹಾಗೂ ಎಡ ಮತ್ತು ಜಾತ್ಯತೀತ ಪ್ರಜಾಪ್ರಭುತ್ವ ಶಕ್ತಿಗಳ ಮೇಲಿನ ಅರೆ ಫ್ಯಾಸಿಸ್ಟ್ ದಬ್ಬಾಳಿಕೆಯನ್ನು ವಿರೋಧಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿತು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಬಳಿ ನಡೆದ ಧರಣಿಯನ್ನು ಉದ್ದೇಶಿಸಿ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಮಾತನಾಡಿ, ತ್ರಿಪುರ ಜನತೆ ಹಾಗೂಡ ಎಡ ಮತ್ತು ಜಾತ್ಯಾತೀತ ಪ್ರಜಾಪ್ರಭುತ್ವ ಶಕ್ತಿಗಳಿಗೆ ಸೌಹಾರ್ದ ಬೆಂಬಲ ವ್ಯಕ್ತಪಡಿಸಿ ದೇಶವ್ಯಾಪಿ ಪ್ರತಿಭಟನೆ ನಡೆಯುತ್ತದೆ ಎಂದರು.
ಬಿಜೆಪಿ ಪಕ್ಷ ಸಿಪಿಐ(ಎಂ) ಪಕ್ಷ ಮತ್ತು ಜಾತ್ಯಾತೀತ ಪಕ್ಷಗಳ ಮೇಲೆ ಗುಂಡಾಗಿರಿ ನಡೆಸುತ್ತಿದ್ದು, ಪಕ್ಷದ ಕಚೇರಿ ಮೇಲೆ, ಕಾರ್ಯಕರ್ತರ ಮೇಲಿನ ದೌರ್ಜನ್ಯ ದಬ್ಬಾಳಿಕೆ ಮಿತಿಮೀರಿದ್ದು ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಂಡು ನ್ಯಾಯಸಮ್ಮತವಾದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದರು.
ಸಿಪಿಐ(ಎಂ) ರಾಜ್ಯ ಸಹ ಕಾರ್ಯದರ್ಶಿ ಗೋಪಾಲ್ ಕೃಷ್ಣ ಹರಳಹಳ್ಳಿ, ಬೆಂಗಳೂರು ಉತ್ತರ ಜಿಲ್ಲಾ ಸಮಿತಿ ಕಾರ್ಯದರ್ಶಿ ಎನ್. ಪ್ರತಾಪ್ ಸಿಂಹ, ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಿ.ಎನ್.ಮಂಜುನಾಥ್, ಜಿಲ್ಲಾ ಮುಖಂಡರಾದ ಗೌರಮ್ಮ, ಬಿ ರಾಜಶೇಖರ್ ಮೂರ್ತಿ ಮುಂತಾದವರು ಮಾತನಾಡಿದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ