ಜಂತರ್ ಮಂತರ್ ಪ್ರತಿಭಟನೆಗೆ ಸಿಪಿಐ(ಎಂ) ಬೆಂಬಲ

ನವದೆಹಲಿ: ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸಿಸ್ಟ್) [ಸಿಪಿಐ(ಎಂ)] ಮಹಾಸಚಿವ ಎಂ.ಎ. ಬೇಬಿ ಹಾಗೂ ಹಿರಿಯ ನಾಯಕಿ ಬ್ರಿಂದಾ ಕಾರಟ್ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಯುವಕರನ್ನು ಭೇಟಿ ಮಾಡಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದರು. ಜಂತರ್

ಹಿರಿಯ ನಾಯಕರು ಅನಿರ್ದಿಷ್ಟ ಉಪವಾಸ ಸತ್ಯಾಗ್ರಹದಲ್ಲಿರುವ ಸೋನಂ ವಾಂಗ್ಚುಕ್ ಅವರಿಗೆ ಸಹ ತಮ್ಮ ಐಕ್ಯತೆಯನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೆನ್ಯಾ| ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವು: ಪರಿಹಾರ ₹84.4 ಲಕ್ಷಕ್ಕೆ ಹೆಚ್ಚಿಸಿದ ಹೈಕೋರ್ಟ್

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಂ.ಎ. ಬೇಬಿ, ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ಕುಸಿತಕ್ಕೆ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹೇಳಿದರು.

ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ಆರಂಭವಾದ ಪ್ರತಿಭಟನೆಗೆ ಈಗಾಗಲೇ 23 ದಿನಗಳು ಕಳೆದಿವೆ. ವಿದ್ಯಾರ್ಥಿಗಳು ಮತ್ತು ಯುವಕರ ವಿವಿಧ ಸಂಘಟನೆಗಳು, ವಿಶೇಷವಾಗಿ ಸ್ಟುಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುತ್ತಿವೆ.

ಇದನ್ನೂ ನೋಡಿ: “ಇರಾನ್ – ಯು.ಎಸ್. ನಡುವಿನ MoUನಲ್ಲಿ ಏನಿದೆ?” | ಎನ್‌ ಕೆ ವಸಂತರಾಜ, ಗುರುರಾಜ ದೇಸಾಯಿ ಮಾತುಕತೆ Janashakthi Media

Donate Janashakthi Media

Leave a Reply

Your email address will not be published. Required fields are marked *