ತುಮಕೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸರಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದ್ದೂ, ಅದರ ಜತೆಗೆ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಡಿಯಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಸೈಬರ್ ಸೆಕ್ಯೂರಿಟಿ ಸೆಂಟರ್ ತುಮಕೂರಿನಲ್ಲಿ ತೆರೆಯಲು ತಯಾರಿ ನಡೆಸಲಾಗಿದೆ ಎಂದು ಗೃಹ ಸಚಿವ ಮತ್ತು ಸಾಹೇ ವಿ.ವಿ. ಕುಲಾಧಿಪತಿ ಡಾ ಜಿ.ಪರಮೇಶ್ವರ್ ತಿಳಿಸಿದರು.
ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 25 ಸಾವಿರ ಸೈಬರ್ ಪ್ರಕರಣಗಳು ದಾಖಲಾಗುತ್ತಿವೆ. ಇದರಲ್ಲಿ ಶೇ. 20ರಷ್ಟು ಪ್ರಕರಣ ಮಾತ್ರ ಪತ್ತೆ ಹಚ್ಚಲು ಸಾಧ್ಯವಾಗುತ್ತಿದೆ.
ಇದನ್ನೂ ಓದಿ: ಕೊಪ್ಪಳ | ಕೈಗಾರಿಕಾ ಮಾಲೀಕರ ಮತ್ತು ಮಾಲಿನ್ಯ ತಡೆಯದ ಸರಕಾರದ ದುರ್ನಡೆ – ಸಿಪಿಐಎಂ ಖಂಡನೆ
ಸೈಬರ್ ಸೆಕ್ಯೂರಿಟಿ ಕೋರ್ಸ್‌ನ ವಿದ್ಯಾರ್ಥಿಗಳಿಗೂ ಪೂರಕವಾಗುವಂತೆ ಚೆನ್ನೈಯ ಕಂಪೆನಿಯೊಂದರ ಸಹಯೋಗದೊಂದಿಗೆ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಸೈಬರ್ ಸೆಕ್ಯೂರಿಟಿ ಕೇಂದ್ರ ಶೀಘ್ರವಾಗಿ ಉದ್ಘಾಟನೆಗೊಳ್ಳಲಿದ್ದು, ಶೈಕ್ಷಣಿಕ ಚಟುವಟಿಕೆ ಜತೆಗೆ ಸಾರ್ವಜನಿಕರಿಗೆ ಆಗುವ ಡಿಜಿಟಲ್ ವ್ಯವಹಾರದ ಮೋಸ, ವಂಚನೆ ಪ್ರಕರಣ ಬೇಗ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ ಎಂದರು. ತುಮಕೂರಿನಲ್ಲಿ
ಇದನ್ನೂ ನೋಡಿ: ನಶಿಸಿಹೋಗುತ್ತಿರುವ ಕನ್ನಡ ಶಾಲೆಗಳು – ಪುರುಷೋತ್ತಮ ಬಿಳಿಮಲೆ ಕಳವಳJanashakthi Media