ಗುಜರಾತ್ : ಗುಜರಾತ್‌ನಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರದಲ್ಲಿ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆದಿದ್ದು, ಹಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಈ ಪುನಾರಚನೆಯಲ್ಲಿ ಹಲವು ಪ್ರಮುಖ ಬದಲಾವಣೆಗಳಾಗಿದ್ದು, ಪ್ರಮುಖವಾಗಿ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಕ್ಯಾಬಿನೆಟ್‌ಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ, ರದ್ದುಗೊಂಡಿದ್ದ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಯನ್ನು ಮತ್ತೆ ಸೃಷ್ಟಿಸಲಾಗಿದೆ.
ಇದನ್ನೂ ಓದಿ : ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 24 ಲಿಂಗತ್ವ ಅಲ್ಪಸಂಖ್ಯಾರು ಆತ್ಮಹತ್ಯೆಗೆ ಯತ್ನ
ರಿವಾಬಾ ಜಡೇಜಾ ಅವರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಅವರಿಗೆ ಯುವಜನ ಸೇವೆ ಮತ್ತು ಕ್ರೀಡೆ, ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜವಾಬ್ದಾರಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜಾಮ್‌ನಗರ (ಉತ್ತರ) ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ರಿವಾಬಾ ಅವರು ಮೊದಲ ಬಾರಿಗೆ ಸಚಿವ ಸಂಪುಟ ಸೇರಿದ್ದಾರೆ.
2021ರಲ್ಲಿ ವಿಜಯ್ ರೂಪಾನಿ ರಾಜೀನಾಮೆ ನೀಡಿದ ನಂತರ ರದ್ದುಗೊಂಡಿದ್ದ ಉಪಮುಖ್ಯಮಂತ್ರಿ ಹುದ್ದೆಯನ್ನು ಮತ್ತೆ ಸೃಷ್ಟಿಸಲಾಗಿದೆ.
ಹಿರಿಯ ನಾಯಕರಾದ ಶ್ರೀ ಕೌಶಿಕ್ ಪಟೇಲ್ ಅವರನ್ನು ಹೊಸ ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲಾಗಿದೆ. ಕೌಶಿಕ್ ಪಟೇಲ್ ಅವರು ಹಣಕಾಸು ಮತ್ತು ಇಂಧನ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ನಿರ್ವಹಿಸಲಿದ್ದಾರೆ.ಸಂಪುಟದಲ್ಲಿ 5 ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಕೆಲ ಹಾಲಿ ಸಚಿವರ ಖಾತೆಗಳನ್ನು ಬದಲಾಯಿಸಲಾಗಿದೆ.
ಪ್ರಾದೇಶಿಕ ಮತ್ತು ಸಮುದಾಯ ಸಮತೋಲನವನ್ನು ಕಾಯ್ದುಕೊಳ್ಳಲು ಈ ಪುನಾರಚನೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಹೊಸ ಸಚಿವರು ಇಂದು (ಶುಕ್ರವಾರ) ಸಂಜೆ ರಾಜಭವನದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪುನಾರಚನೆಯು ಮುಂದಿನ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
ಇದನ್ನೂ ನೋಡಿ : ಉತ್ತರ ಕನ್ನಡ | ಎಮರ್ಜೆನ್ಸಿಯಲ್ಲಿ ಜೀವ ಉಳಿಸಿಕೊಳ್ಳಲು ಸುಸಜ್ಜಿತ ಆಸ್ಪತ್ರೆ ಇಲ್ಲ | ಯಮುನಾ ಗಾಂವ್ಕರ್
