ಬೆಂಗಳೂರು: ಮೇ 3 ಶನಿವಾರದಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಆರ್‌ಸಿಬಿ ನಡುವಿನ ಐಪಿಎಲ್ ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರು ಸಿಸಿಬಿ ಪೊಲೀಸರು ಮೇ 4 ಭಾನುವಾರದಂದು ಬಂಧಿಸಿದ್ದಾರೆ.
ಚರಣ್ ರಾಜ್, ಹರ್ಷವರ್ಧನ್, ವಿನಯ್ ಮತ್ತು ವೆಂಕಟಸಾಯಿ ಕಿರಣ್ ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 38,400 ರೂ. ಮೌಲ್ಯದ 32 ಐಪಿಎಲ್ ಟಿಕೆಟ್, 1 ಮೊಬೈಲ್, 1 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಬೆಂಗಳೂರು
ಇದನ್ನೂ ಓದಿ: ಅಬಕಾರಿ ಇಲಾಖೆ: ಖಾಲಿ ಇರುವ 265 ಹುದ್ದೆಗಳ ನೇರ ನೇಮಕಾತಿ
ಸಾಮಾನ್ಯವಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಆರ್‌ಸಿಬಿ ನಡುವಿನ ಪಂದ್ಯಕ್ಕೆ ಭಾರೀ ಬೇಡಿಕೆ ಇರುತ್ತದೆ. ಅದನ್ನೇ ಬಂಡವಾಳ ಮಾಡಿಕೊಂಡ ಆರೋಪಿಗಳು, 1200 ರೂ. ಮೌಲ್ಯದ ಟಿಕೆಟ್‌ಗಳನ್ನು 5-10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು.
ಈ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ವಿಶೇಷ ವಿಚಾರಣಾ ದಳದ ಅಧಿಕಾರಿಗಳು, ಖರೀದಿದಾರರ ಸೋಗಿನಲ್ಲಿ ಹೋಗಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ್ದಾರೆ.
ಈ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಿ ಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಇದನ್ನೂ ನೋಡಿ: ಮೇ ದಿನದ ವಿಶೇಷ | ಕೆಲಸದ ಅವಧಿ ಎಷ್ಟಿರಬೇಕು? ಕಾರ್ಮಿಕ ಕಾನೂನು ಏನು ಹೇಳುತ್ತದೆ? Janashakthi Media