ಅಶ್ಲೀಲ ಪದ ಬಳಕೆ: ಬಿಜೆಪಿ ಎಂಎಲ್‌ಸಿ ಸಿಟಿ ರವಿ ಬಂಧನ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಅವಾಚ್ಯಪದ ಬಳಕೆ ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ.

ಇದನ್ನೂ ಓದಿ : ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ಅಮಾನತಿಗೆ ಕಾಂಗ್ರೆಸ್‌ ನಾಯಕರು ಒತ್ತಡ

ರಾಜ್ಯಸಭೆಯಲ್ಲಿ ಡಾ. ಬಿ.ಆರ್.‌ ಅಂಬೇಡ್ಕರ್‌ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಅಮಿತ್‌ ಶಾ  ಹೇಳಿಕೆ ಖಂಡಿಸಿ ಪರಿಷತ್‌ನಲ್ಲಿ  ಇಂದು ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಾತಿನ ಚಕಮಕಿ ನಡೆಯವಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ದೂರು ದಾಖಲಿಸಿದ್ದರು.

ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆಯೇ ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರು ಸಿಟಿ ರವಿ ವಿರುದ್ಧ ಸಿಡಿದೆದ್ದಿದ್ದು, ಅವರ ಕಾರಿಗೆ ಮುತ್ತಿಗೆ ಹಾಕಿದ್ದಾರೆ ಎನ್ನಲಾಗಿದೆ.

Donate Janashakthi Media

Leave a Reply

Your email address will not be published. Required fields are marked *