– ಬಿ.ಎಸ್.ಯಡಿಯೂರಪ್ಪ ಆವರ ಸಂಪುಟದಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಸಿಟಿ ರವಿ
– ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಹಿನ್ನೆಲೆಯಲ್ಲಿ ರಾಜೀನಾಮೆ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಚಿವ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅಂಗೀಕರಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವರಾಗಿ ಕಾರ್ಯನಿರ್ವಹಿಸಿದ ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಆದರೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರವಿ ಅವರ ರಾಜೀನಾಮೆಯನ್ನು ಅಂಗೀಕರಿಸಿರಲಿಲ್ಲ.