ಬೆಂಗಳೂರು: ಸಿ.ಟಿ ರವಿ ಅವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಅವರು ಮತಿಭ್ರಮಣೆಯಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನು ನಿಮ್ಹಾನ್ಸ್ ಅಥವಾ ಬೇರೆ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿ ಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಸಿದಂತೆ ಸಿ.ಟಿ ರವಿ ಹೇಳಿಕೆ ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡುತ್ತೇನೆ.
ಇದನ್ನೂ ಓದಿ : ನೆಹರೂ ನಿಧನರಾದಾಗ ವಾಜಪೇಯಿ ಮಾಡಿದ ಭಾಷಣವನ್ನು ಸಿ ಟಿ ರವಿ ಓದಬೇಕು: ಎಚ್ ವಿಶ್ವನಾಥ್
ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಆದರ ವಿಚಾರಣೆ ನಡೆಯುತ್ತಿದೆ. ಆದರೆ ಬೇರೆ ಪ್ರಕರಣಗಳಲ್ಲಿ ಆತುರವಾಗಿ ಶಿಕ್ಷೆ ಪ್ರಕಟವಾಗುತ್ತದೆ. ಹೀಗಾಗಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.