ಬೆಂಗಳೂರು: ಸಿಟಿ ರವಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ನೀಡಿರುವ ಆಕ್ಷೇಪಾರ್ಹ ಹೇಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಟಿ ರವಿ ವಿಚಾರಣೆ ನಡೆದಿದೆ. ಇದರ ಬೆನ್ನಲ್ಲೇ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ದಾಖಲಿಸಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಎರಡು ದಿನದ ಹಿಂದಷ್ಟೇ ಸಿಟಿ ರವಿ ವಿಚಾರಣೆ ನಡೆಸಿದ್ದ ಸಿಐಡಿ ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ 164 ಹೇಳಿಕೆ ದಾಖಲಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ : ಕೆರೆಗಳ ಉಳಿವಿನ ಹೋರಾಟಕ್ಕಾಗಿ ಸರ್ಕಾರ ಎಷ್ಟೇ ಕೇಸುಗಳನ್ನು ಹಾಕಿದರು ನಾವು ಬಗ್ಗುವುದಿಲ್ಲ ಜಗ್ಗುವುದಿಲ್ಲ : ಮುಖ್ಯಮಂತ್ರಿ ಚಂದ್ರು
ಎಸಿಎಂಜೆ 4ರ ನ್ಯಾಯಾಲಯದಲ್ಲಿ 164 ಹೇಳಿಕೆ ದಾಖಲಿಸಲು ಸಿದ್ಧತೆ ಮಾಡಲಾಗಿತ್ತು. ಆದ್ರೆ ಅಲ್ಲಿ ಪುರುಷ ನ್ಯಾಯಾಧೀಶರಿರೋ ಕಾರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳಾ ನ್ಯಾಯಾಧೀಶರ ಮುಂದೆ ಮಾತ್ರ 164 ಹೇಳಿಕೆ ನೀಡ್ತೀನಿ ಎಂದಿದ್ದಾರೆ.
ಹೀಗಾಗಿ ಸಿಐಡಿ ಅಧಿಕಾರಿಗಳು ಮಹಿಳಾ ನ್ಯಾಯಾಧಿಶರ ಮುಂದೆ ಹೇಳಿಕೆ ದಾಖಲಿಸಲು ಅವಕಾಶ ಮಾಡಿಕೊಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಕೋರ್ಟ್ ನಿಂದ ಅನುಮತಿ ಸಿಕ್ಕ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 164 ಹೇಳಿಕೆಯನ್ನ ಸಿಐಡಿ ಅಧಿಕಾರಿಗಳು ದಾಖಲಿಸಲಿದ್ದಾರೆ.
ಇದನ್ನೂ ನೋಡಿ : ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಕ್ಷೇಪಾರ್ಹ ಪದಬಳಸಿದ ಸಿಟಿ ರವಿ Janashakthi Media