ರಾಜ್ಯ ಮಟ್ಟದ ವಿಚಾರಸಂಕಿರಣ ಆಚರಣೆ – ಚಿಂತಕ ಬಂಜಗೆರೆ ಜಯಪ್ರಕಾಶ್ ರ ಸಾಂಸ್ಕೃತಿಕ ಕೊಡುಗೆ

ಬೆಂಗಳೂರು: ‘ಮೂರು ದಶಕಗಳಿಂದ ಜನಪರ ಚಳವಳಿಗಳಲ್ಲಿ ಸಕ್ರಿಯವಾಗಿರುವ ಚಿಂತಕ ಬಂಜಗೆರೆ ಜಯಪ್ರಕಾಶ್ ರ ಸಾಹಿತ್ಯ ಮತ್ತು ಸಾಂಸ್ಕೃತಿಕ ಕೊಡುಗೆ ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ವಿಚಾರಸಂಕಿರಣವನ್ನು ಫೆಬ್ರವತರಿ 11ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆʼ ಎಂದು ಶುಕ್ರವಾರ, ಫೆಬ್ರವರಿ 7ರಂದು ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಅಹಿಂದ ಜವರಪ್ಪ ತಿಳಿಸಿದರು. ರಾಜ್ಯ

‘ಪದ’ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಹಾವೇರಿ| ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಸೃಷ್ಟಿ ಪಾಟೀಲ ರಾಜೀನಾಮೆ

‘ಸಾಹಿತಿ ಬರಗೂರು ರಾಮಚಂದ್ರಪ್ಪ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದರಾಜ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಸಾಹಿತಿಗಳಾದ ಸಿದ್ದನಗೌಡ ಪಾಟೀಲ, ಎಸ್.ಜಿ. ಸಿದ್ಧರಾಮಯ್ಯ, ಸ್ವಾಮಿ ಆನಂದ್, ರವಿಕುಮಾರ್ ಬಾಗಿ ವಿಷಯ ಮಂಡಿಸುವರು.

ಲೇಖಕರೊಂದಿಗೆ ಪ್ರಕಾಶ್ ಮಂಟೇದ, ಸಂವಾದದಲ್ಲಿ ಹುಲಿಕುಂಟೆ ಮೂರ್ತಿ, ಟಿ.ಎಚ್. ಲವಕುಮಾರ್‌, ರೇಣುಕಾರಾಧ್ಯ, ಎಸ್‌.ಪವಿತ್ರಾ, ಎಸ್‌. ಮಂಜುನಾಥ್, ಕಿರಣ್‌ಕುಮಾರಿ, ಕರಿ ಸ್ವಾಮಿ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ಬೋಧಿವೃಕ್ಷ ಸೊಸೈಟಿ ಫಾರ್ ಡೆವಲಪ್‌ಮೆಂಟ್‌ ಅಧ್ಯಕ್ಷ ಎಂ.ಎಸ್‌. ಚಂದ್ರ, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಮನೋಜ್, ಉತ್ತನಹಳ್ಳಿ ಶಿವಣ್ಣ ಪಾಲ್ಗೊಂಡಿದ್ದರು.

ಇದನ್ನೂ ನೋಡಿ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ 2020ರ ರದ್ದತಿ ಮತ್ತು ಕಾಂಗ್ರೆಸ್ ಸರ್ಕಾರದ ವೈಫಲ್ಯ…. Janashakthi Media

Donate Janashakthi Media

Leave a Reply

Your email address will not be published. Required fields are marked *