ವಿಜಯಪುರ: ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಎಂದೂ ದ್ವೇಷ ರಾಜಕಾರಣ ಮಾಡಿದವರಲ್ಲ. ಆದರೆ, ಈಗ ಬರುವವರು ಆ ರೀತಿ ಇಲ್ಲ. ಆದುದರಿಂದ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ಏನಾದರೂ ಮಾತನಾಡುವ ಮುನ್ನ ಎಚ್ಚರಿಕೆ ಇರಲಿ ಎಂದು ಮೇ 31ರಂದು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ ನೀಡಿದ್ದಾರೆ.
ನಾನು ಸಿದ್ದರಾಮಯ್ಯನವರ ಬಗ್ಗೆ ಕೀಳಾಗಿ ಮಾತನಾಡುವುದಿಲ್ಲ. ಅವರೊಬ್ಬ ಹಿರಿಯ ನಾಯಕ, ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿದ್ದವರು, ಅತೀ ಹೆಚ್ಚು ಬಜೆಟ್ಗಳನ್ನು ಮಂಡಿಸಿದ ಅನುಭವಿ. ನಾವು ವಿಧಾನಸಭೆಯ ಒಳಗೆ ಎಷ್ಟೇ ಟೀಕೆ ಮಾಡಿದರೂ ಅವರು ಎಂದಿಗೂ ಹಳೆಯ ಫೈಲ್ಗಳನ್ನು ತೆಗೆದು ವೈಯಕ್ತಿಕ ದ್ವೇಷ ಸಾಧಿಸಲಿಲ್ಲ ಎಂದು ಹೇಳಿದರು.
ಇದನ್ನೂ ಓದಿ: ಸಿಬಿಎಸ್ಇ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ: ‘ತಪ್ಪು ಅವರದು, ದಂಡ ವಿದ್ಯಾರ್ಥಿಗಳದು’
ಆದರೆ, ಈಗ ಬರುವವರು ಆ ಕೆಲಸ ಮಾಡುತ್ತಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆದರೆ ಅವರಿಗಿಂತ ಹೆಚ್ಚು ಖುಷಿ ಪಡುವುದು ನಮ್ಮ ಬಿಜೆಪಿ ರಾಜ್ಯಾಧ್ಯಕ್ಷರು. ಏಕೆಂದರೆ ಅವರಿಬ್ಬರೂ ವ್ಯವಹಾರಿಕ ಪಾಲುದಾರರು(ಬ್ಯುಸಿನೆಸ್ ಪಾರ್ಟ್ನರ್ ಗಳು) ಎಂದು ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.
ಇದನ್ನೂ ನೋಡಿ: ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ.60 ಹೆಚ್ಚಳ: ಸಿಐಟಿಯು ಪ್ರತಿಕ್ರಿಯೆ ಏನು? Janashakthi Media
