ತಮಿಳುನಾಡಿಗೆ ಡಿ.31 ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ನಿರ್ದೇಶನ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನ ಜತೆ CWRC ಗುರುವಾರ ಸಭೆ ನಡೆಸಿದ CWRC, ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ಡಿಸೆಂಬರ್  31ರವರಗೆ ಪ್ರತಿನಿತ್ಯ 3216 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.

ಡಿಸೆಂಬರ್​ ಅವಧಿಯಲ್ಲಿ ಹರಿಸಬೇಕಿರುವ 6 ಟಿಎಂಸಿ ನೀರು ಹಾಗೂ ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ನೀರು ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ಸಭೆಯಲ್ಲಿ ತಮಿಳುನಾಡು ಬೇಡಿಕೆ ಇಟ್ಟಿದೆ.

ಇದನ್ನೂ ಓದಿ: ಜಾತಿ ಗಣತಿ ಮೂಲ ವರದಿ ನಾಪತ್ತೆ ವಿವಾದ | ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ ಹೇಳಿದ್ದೇನು?

ತಮಿಳುನಾಡು ಬೇಡಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ರಾಜ್ಯದಲ್ಲಿ ಈಗ ಬರ ಪರಿಸ್ಥಿತಿ ಇದೆ. ತಮಿಳುನಾಡು 17ಟಿಎಂಸಿ ನೀರು ಕೇಳುತ್ತಿರುವುದಕ್ಕೆ ಅರ್ಥವೇ ಇಲ್ಲ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲ. ಕುಡಿಯುವುದಕ್ಕೂ ನೀರು ಸಂಗ್ರಹ ಇಲ್ಲ. ಕರ್ನಾಟಕದಲ್ಲಿ ಮುಂದೆ ಮಳೆಯಾಗುವ ಸಾಧ್ಯತೆ ಸಹ ಕಡಿಮೆ. ತಮಿಳುನಾಡು ರಾಜ್ಯದಲ್ಲಿ ಈಗ ಹೆಚ್ಚು ಮಳೆಯಾಗುತ್ತಿದೆ. ಹಿಂಗಾರು ಮಾರುತಗಳು ಪ್ರಬಲವಾಗಿವೆ, ಮಳೆ ಹೆಚ್ಚು ಸುರಿಯುತ್ತಿದೆ. ತಮಿಳುನಾಡಿಗೆ ನೀರು ಬಿಟ್ಟರೆ ವಾಪಸ್ ತೆಗೆದುಕೊಳ್ಳಲು ಸಾಧ್ಯವೆ? ಹೀಗಾಗಿ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ವಾದಿಸಿದ್ದಾರೆ.

ಅಂತಿಮವಾಗಿ ತಮಿಳುನಾಡು ಬೇಡಿಕೆ ತಿರಸ್ಕರಿಸಿದ CWRC, ಕರ್ನಾಟಕಕ್ಕೆ ಒಂದು ತಿಂಗಳು ಅಂದರೆ ನವೆಂಬರ್ 23ರಿಂದ ಡಿಸೆಂಬರ್ 23ರ ವರೆಗೆ ಪ್ರತಿನಿತ್ಯ 3216 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.

ವಿಡಿಯೋ ನೋಡಿ: ವಿಶ್ವಕಪ್‌ ಮೇಲೆ ಕಾಲಿಟ್ಟಾಗ ಚುರ್‌ ಎಂದ ಹೃದಯ ದಲಿತರಿಗೆ ಮೂತ್ರ ಕುಡಿಸಿದಾಗ ಯಾಕೆ ಮಿಡಿಯಲಿಲ್ಲ? #worldcup2023

Donate Janashakthi Media

Leave a Reply

Your email address will not be published. Required fields are marked *