ಬೆಂಗಳೂರು : ನೆಲಮಂಗಲದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಗಾರ್ಮೆಂಟ್ಸ್ ಒಂದಕ್ಕೆ ಬೆಂಕಿ ತೆಗೆದು ಸುಮಾರು 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಬಟ್ಟೆಗಳು ಕರಕಲಾಗಿರುವ ಘಟನೆ ನಡೆದಿದೆ.
ನೆಲಮಂಗಲದ ಬಳಿ ಆರ್.ಎ ಫ್ಯಾಶನ್ ಗಾರ್ಮೆಂಟ್ಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅರುಣ್ ಮತ್ತು ಶಿವುಗೆ ಎಂಬುವರಿಗೆ ಸೇರಿದ ಗಾರ್ಮೆಂಟ್ಗೆ ಬೆಂಕಿ ತಗುಲಿದೆ.
ಇದನ್ನೂ ಓದಿ : ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಕ್ರೂರಿ – ಆರೋಪಿಯ ಬಂಧನ
ಈ ಒಂದು ಅಗ್ನಿ ಅವಘಡದಲ್ಲಿ ಗಾರ್ಮೆಂಟ್ಸ್ನಲ್ಲಿದ್ದ ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ಬಟ್ಟೆಗಳು ಸೇರಿದಂತೆ ಇನ್ನೂ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಪಿಣ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಇದೀಗ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನೆ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ನೋಡಿ : ನಿವೃತ್ತ ವಿಮಾ ನೌಕರರ ಪ್ರತಿಭಟನೆ : ಪಿಂಚಣಿ ನೌಕರರ ಬಿಕ್ಷೆಯಲ್ಲ, ಹಕ್ಕು Janashakthi Media