ಡಿ.ಕೆ ಶಿಗೆ ಹೆಚ್ಚಿನ ಶಾಸಕರ ಬೆಂಬಲವಿಲ್ಲ; ನಾನೇ ಐದು ವರ್ಷ ಮುಖ್ಯಮಂತ್ರಿ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತ ಚರ್ಚೆಗಳು ಮುಂದುವರಿದಿರುವ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ನೀಡಿದ ಹೇಳಿಕೆ ಇದೀಗ ಚರ್ಚೆಗೆ ಕಾರಣವಾಗಿದೆ. ಬೆಂಬಲ

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ರಿಗೆ ಹೆಚ್ಚಿನ ಶಾಸಕರ ಬೆಂಬಲವಿಲ್ಲ ಎಂದು ಹೇಳುವ ಮೂಲಕ, ತಾವೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯುವ ತಮ್ಮ ಇಂಗಿತವನ್ನು ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮವೊಂದಕ್ಕೆ ಮಾತನಾಡಿದ ಸಿದ್ದರಾಮಯ್ಯ, “ನಾನೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ,” ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನದ ಕುರಿತು ಯಾವುದೇ ಅಧಿಕಾರ ಹಂಚಿಕೆ ಒಪ್ಪಂದವಾಗಿಲ್ಲ ಎಂದೂ ಅವರು ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರ ಫೋಟೋ – ವಿಡಿಯೋ ಮಾಡಿ ಪೋಸ್ಟ್ ಮಾಡುತ್ತಿದ್ದ ವ್ಯಕ್ತಿ ಬಂಧನ

ಡಿಕೆಶಿ ಪರ ಕೆಲ ಶಾಸಕರು ಮುಖ್ಯಮಂತ್ರಿ ಸ್ಥಾನಕ್ಕೆ ಆಗ್ರಹಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಕೆಲವು ಶಾಸಕರು ಹೇಳಬಹುದು, ಆದರೆ ಹೆಚ್ಚು ಶಾಸಕರು ಅಲ್ಲ” ಎಂದು ಹೇಳುವ ಮೂಲಕ, ಡಿ.ಕೆ. ಶಿವಕುಮಾರ್ ಅವರಿಗೆ ಶಾಸಕರ ಬಲವಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಅಂತಿಮವಾಗಿ, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ತಾವೂ ಸೇರಿದಂತೆ ಡಿ.ಕೆ. ಶಿವಕುಮಾರ್ ಎಲ್ಲರೂ ಬದ್ಧರಾಗಿರಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇತ್ತೀಚೆಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೂ ಮುನ್ನ ನಂದಿ ಗ್ರಾಮದ ಭೋಗ ನಂದೀಶ್ವರ ದೇವಸ್ಥಾನಲ್ಲಿ ಪೂಜೆ ನೆರವೇರಿಸಿ ಬಳಿಕ ಮಾತನಾಡಿದ್ದ ಸಿದ್ದರಾಮಯ್ಯ ಅವರು, ನಾನೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಹೇಳಿದ್ದರು. ಇದು ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು, ನನ್ನ ಮುಂದೆ ಯಾವುದೇ ಆಯ್ಕೆಗಳಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತೇನೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದರು.

ಇದನ್ನೂ ನೋಡಿ: ಸಾರ್ವತ್ರಿಕ ಮುಷ್ಕರ | ಕೇಂದ್ರ – ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಸಿಡಿದೆದ್ದ ರೈತ – ಕಾರ್ಮಿಕರು Janashakthi

Donate Janashakthi Media

Leave a Reply

Your email address will not be published. Required fields are marked *