ಬೆಂಗಳೂರು ಕಾಂಗ್ರೆಸ್ ಕಚೇರಿ ಮುಂದೆ ಡಿ.ಕೆ. ಶಿವಕುಮಾರ್ ಸಿಎಂ ಕಟ್‌ಔಟ್!

ಬೆಂಗಳೂರು:ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು “ಮುಂದಿನ ಮುಖ್ಯಮಂತ್ರಿ” ಎಂದು ಬಿಂಬಿಸುವ ಬೃಹತ್ ಕಟೌಟ್‌ಗಳು ಮತ್ತು ಪೋಸ್ಟರ್‌ಗಳು ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿ ಹೊರಭಾಗದಲ್ಲಿ ಕಾಣಿಸಿಕೊಂಡಿವೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು 

ಡಿ.ಕೆ. ಶಿವಕುಮಾರ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು “ಮುಂದಿನ ಮುಖ್ಯಮಂತ್ರಿ ಡಿಕೆಎಸ್” ಎಂಬ ಘೋಷಣೆಗಳಿರುವ ಪೋಸ್ಟರ್‌ಗಳನ್ನು ಅಳವಡಿಸಿದ್ದಾರೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನ ಬದಲಾವಣೆಯ ಕುರಿತು ಮತ್ತೆ ಊಹಾಪೋಹಗಳು ಜೋರಾಗಿವೆ. ಕಾಂಗ್ರೆಸ್ ಹೈಕಮಾಂಡ್ ರಾಜ್ಯ ರಾಜಕೀಯ ಬೆಳವಣಿಗೆಗಳ ಮೇಲೆ ನಿಗಾ ಇಟ್ಟಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಎಐಎಡಿಎಂಕೆ ವಿಜಯ್ ಸರ್ಕಾರವನ್ನು ವಿರೋಧಿಸಲಿದೆ: ಇಪಿಎಸ್

ಕಳೆದ ಕೆಲವು ತಿಂಗಳುಗಳಿಂದಲೇ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ರಾಜಕೀಯ ಚರ್ಚೆಗಳು ನಡೆಯುತ್ತಿವೆ. ಈ ಹಿಂದೆ ಕೂಡ ಡಿ.ಕೆ. ಶಿವಕುಮಾರ್ ಅವರು “ಮುಖ್ಯಮಂತ್ರಿ ಸ್ಥಾನ ಕುರಿತು ತೀರ್ಮಾನ ಆಗಿದೆ, ಸೂಕ್ತ ಸಮಯದಲ್ಲಿ ತಿಳಿಸಲಾಗುತ್ತದೆ” ಎಂದು ಹೇಳಿಕೆ ನೀಡಿದ್ದರು. ಮತ್ತೊಂದೆಡೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ಸಾರ್ವಜನಿಕವಾಗಿ “ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಎಂದು ಸ್ಪಷ್ಟಪಡಿಸುತ್ತಲೇ ಬಂದಿದ್ದಾರೆ.  ಬೆಂಗಳೂರು 

ಇತ್ತೀಚೆಗೆ ಡಿ.ಕೆ. ಶಿವಕುಮಾರ್ ಬೆಂಬಲಿಗ ಕೆಲ ಶಾಸಕರು ಮೇ 15ರೊಳಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಬಹುದು ಎಂಬ ಹೇಳಿಕೆಗಳನ್ನು ನೀಡಿದ್ದರು. ಆದರೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಯಾವುದೇ ತೀರ್ಮಾನ ಪ್ರಕಟಿಸಿಲ್ಲ. ಆದರೂ ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಈ ಕಟೌಟ್‌ಗಳು ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತ ಚರ್ಚೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿವೆ

ಇದನ್ನೂ ನೋಡಿ: ಯುದ್ಧದಲ್ಲಿ ಸೋತ ಯು.ಎಸ್ ನ್ನು ಮಾತುಕತೆಯಲ್ಲಿ ಗೆಲ್ಲಲು ಬಿಡದ ಇರಾನ್ Janashakthi Media

Donate Janashakthi Media

Leave a Reply

Your email address will not be published. Required fields are marked *