ಬೆಂಗಳೂರು| ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಜೂನ್‌ 3ರಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. “ಡಿ.ಕೆ. ಶಿವಕುಮಾರ್ ಎಂಬ ಹೆಸರಿನವನಾದ ನಾನು, ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯವನ್ನು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ಮಾಡಿ ನಿರ್ವಹಿಸುತ್ತೇನೆ” ಎಂದು ಶಪಥ ಸ್ವೀಕರಿಸಿದರು. ಬೆಂಗಳೂರು

ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಂ.ಬಿ. ಪಾಟೀಲ್ ಅವರು ಬಸವಣ್ಣ ಹಾಗೂ ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ ಶಪಥ ಸ್ವೀಕರಿಸಿದರು. ಕೆ.ಜೆ. ಜಾರ್ಜ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ನಾಯಕ ಬಿಕೆ ಹರಿ ಪ್ರಸಾದ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಹೈಕಮಾಂಡ್

ಇದೇ ವೇಳೆ ಕೆಲವು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕೆ.ಹೆಚ್. ಮುನಿಯಪ್ಪ, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಡಾ. ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಸಚಿವರಾಗಿ ಶಪಥ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಪ್ರಮುಖ ನಾಯಕರು ಭಾಗವಹಿಸಿದರು. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ತೆಲಂಗಾಣ ಸಚಿವ ಅಜರುದ್ದೀನ್ ಹಾಗೂ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಮಾರಂಭದ ನಂತರ ಮೊದಲ ಸಂಪುಟ ಸಭೆಯ ಅಧ್ಯಕ್ಷತೆಯನ್ನು ಡಿ.ಕೆ ಶಿವಕುಮಾರ್ ವಹಿಸಲಿದ್ದಾರೆ

ಪ್ರಮಾಣವಚನ ಸಮಾರಂಭದ ನಂತರ, ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಮೊದಲ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲು ವಿಧಾನಸೌಧಕ್ಕೆ ತೆರಳಲಿದ್ದಾರೆ. ಕಾಂಗ್ರೆಸ್ ಭವನದ ಉದ್ಘಾಟನೆಯನ್ನು ಜೂನ್‌ 3ರಿಂದ 4ಕ್ಕೆ ಮುಂದೂಡಲಾಗಿದೆ.

ಇದನ್ನೂ ನೋಡಿ: ರಾಮಜನ್ಮಭೂಮಿ ತೀರ್ಪಿನಿಂದ ಎಸ್ ಐಆರ್ ತೀರ್ಪಿನವರೆಗೆ.. ನ್ಯಾಯಾಂಗದ ವಿಶ್ವಾಸಾರ್ಹತೆ ಏನು? ಎಂತ? Janashakthi Media

Donate Janashakthi Media

Leave a Reply

Your email address will not be published. Required fields are marked *