ಅಸ್ಸಾಂ ಯುವಕರಿಗೆ ಉದ್ಯೋಗ ಭರವಸೆ: ಡಿ.ಕೆ. ಶಿವಕುಮಾರ್ ಹೇಳಿಕೆ

ಗುವಾಹಟಿ: ‘ಉತ್ತಮ ಜೀವನ ಕಂಡುಕೊಳ್ಳುವುದಕ್ಕಾಗಿ ಈಶಾನ್ಯ ಭಾಗದ ಸಾವಿರಾರು ಯುವಕರು ಊರು ತೊರೆಯುತ್ತಿದ್ದಾರೆ. ಸ್ವತಃ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪುತ್ರ ಬೆಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅಸ್ಸಾಂನಲ್ಲಿ ಯುವಕರಿಗೆ ಉದ್ಯೋಗ ಸೃಷ್ಟಿಸುವತ್ತ ಕಾಂಗ್ರೆಸ್ ಗಮನ ಹರಿಸಲಿದ್ದು, ಅವರು ರಾಜ್ಯದಲ್ಲಿ ಯೋಗ್ಯ ಜೀವನೋಪಾಯ ಕಂಡುಕೊಳ್ಳಲು ಸಹಾಯ ಮಾಡಲಿದೆ’ ಎಂದು ಮಾರ್ಚ್‌ 28ರಂದು ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

‘ಅಸ್ಸಾಂನ ಯುವಕರಿಗೆ ಉದ್ಯೋಗದ ಭರವಸೆ ನೀಡುತ್ತೇವೆ. ಅನೇಕ ಸಮಸ್ಯೆಗಳೊಂದಿಗೆ ಯುವಕರು ಇಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿ, ನಂತರ ಉದ್ಯೋಗಕ್ಕಾಗಿ ದಕ್ಷಿಣ ರಾಜ್ಯಗಳಿಗೆ ಹೋಗುತ್ತಾರೆ. ಸಿಎಂ ಬಿಸ್ವಾ ಅವರ ಮಗ ಕೂಡ ಬೆಂಗಳೂರಿನಲ್ಲಿ ಓದುತ್ತಿದ್ದಾರೆ. ಏಕೆಂದರೆ ಬೆಂಗಳೂರು ಸುರಕ್ಷಿತ ಮತ್ತು ಅವಕಾಶಗಳನ್ನು ಹುಡುಕುತ್ತಿರುವ ಯುವಕರಿಗೆ ಆಕರ್ಷಕ ನಗರ’ ಎಂದರು.

ಹಿಮಂತ ಅವರ ಪುತ್ರ ಬೆಂಗಳೂರಿನ ರಾಷ್ಟ್ರೀಯ ಕಾನೂನು ವಿವಿಯಲ್ಲಿ ವಿದ್ಯಾರ್ಥಿಯಾಗಿದ್ದಾರೆ.

ಉಪಚುನಾವಣೆ ಪ್ರಚಾರ ಅಖಾಡಕ್ಕೆ ಏ.4ರಿಂದ ಕುಮಾರಸ್ವಾಮಿ ಎಂಟ್ರಿ

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪಚುನಾವಣೆ ಪ್ರಚಾರ ರಂಗೇರಿರುವ ಸಮಯದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಏ.4 ಮತ್ತು 5ರಂದು ಈ ಎರಡೂ ಕ್ಷೇತ್ರಗಳಲ್ಲಿ ಮಿತ್ರ ಪಕ್ಷ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ.

ಏಪ್ರಿಲ್‌ 4ರಂದು ದಾವಣಗೆರೆ ದಕ್ಷಿಣ ಕ್ಷೇತ್ರ ಮತ್ತು ಏ.5ರಂದು ಬಾಗಲಕೋಟೆಯಲ್ಲಿ ಕ್ರಮವಾಗಿ ಬಿಜೆಪಿ ಅಭ್ಯರ್ಥಿಗಳಾದ ಶ್ರೀನಿವಾಸ್ ದಾಸಕರಿಯಪ್ಪ ಹಾಗೂ ವೀರಣ್ಣ ಚರಂತಿಮಠ ಪರ ಎಚ್‌.ಡಿ.ಕುಮಾರಸ್ವಾಮಿ ಅವರು ಮತ ಯಾಚಿಸಲಿದ್ದಾರೆ. ಈ ಪ್ರಚಾರದ ವೇಳೆ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ ಶಾಸಕರು, ಸಂಸದರು, ಮಾಜಿ ಸಚಿವರು ಹಾಗೂ ಮುಖಂಡರು ಸಾಥ್‌ ನೀಡಲಿದ್ದಾರೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ

ರಾಜ್ಯದ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡದೇ ಎನ್‌ಡಿಎಗೆ ಬೆಂಬಲ ಸೂಚಿಸಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಎನ್‌ಡಿಎ ಮೈತ್ರಿ ಕೂಟದ ಭಾಗವಾಗಿರುವುದರಿಂದ ಜೆಡಿಎಸ್‌ ನಾಯಕರು ಹಾಗೂ ಮುಖಂಡರು ಇದೀಗ ಎರಡೂ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ.

ಇದನ್ನೂ ನೋಡಿ: ಬಿಜೆಪಿ–ಸಂಘಪರಿವಾರದಿಂದ ಇತಿಹಾಸ ವಿರೂಪಗೊಳಿಸುವ ಪ್ರಯತ್ನ – ಪ್ರಿಯಾಂಕ್ ಖರ್ಗೆ Janashakthi Media

Donate Janashakthi Media

Leave a Reply

Your email address will not be published. Required fields are marked *