ಬೆಂಗಳೂರು: ಮೋಡ ಬಿತ್ತನೆ ಮಾಡಲು ಎರಡು- ಮೂರು ದಿನಗಳಲ್ಲಿ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಶಿವಕುಮಾರ್
ಸೆ-25 ಸದಾಶಿವನಗರದ ನಿವಾಸದ ಬಳಿ ಸೋಮವಾರ ಬೆಳಿಗ್ಗೆ ಮಾಧ್ಯಮಗಳಿಗೆ ಪ್ರತ್ರಿಕೆಯೆ ನೀಡಿದ ಅವರು ಹೇಳಿದ್ದಿಷ್ಟು, ಎರಡು ದಿನಗಳಿಂದ ಬೆಂಗಳೂರು ನಗರ ಹಾಗೂ ಸುತ್ತಾಮುತ್ತ ಸುರಿದ ಮಳೆಯಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಮೋಡ ಬಿತ್ತನೆಯಿಂದ ಪರಿಸ್ಥಿತಿ ಸುಧಾರಿಸಬಹುದು ಎನ್ನುವ ನಂಬಿಕೆ ಇದೆ. ಸಚಿವ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆ ಹಾಗೂ ಕಾವೇರಿ ನೀರು ಸಂಕಷ್ಟದ ಬಗ್ಗೆ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.
ಇದನ್ನೂ ಓದಿ:ವ್ಯಾಪಿಸುತ್ತಿರುವ ಬರದ ಭೀತಿ