ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಮಧು ಜಿ ಮಾದೇಗೌಡ ಮುನ್ನಡೆ

ಮೈಸೂರು: ವಿಧಾನಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ. ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪರಿಗಣಿಸಲಾಗುತ್ತಿದೆ. ಇಲ್ಲಿನ ಮಹರ್ಷಿ ವಾಲ್ಮೀಕಿ ರಸ್ತೆಯ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಎಣಿಕೆ ನಡೆಯುತ್ತಿದ್ದು, ಮಧ್ಯಾಹ್ನ 1.10ರ ವೇಳೆಗೆ ಎಣಿಕೆಯಾಗಿರುವ ಮತಗಳ ಪ್ರಮಾಣವನ್ನು ಗಮನಿಸಿದರೆ ಕಾಂಗ್ರೆಸ್ (ಮಧು ಜಿ.ಮಾದೇಗೌಡ) ಮುನ್ನಡೆಯಲ್ಲಿದ್ದಾರೆ. ಹಾಗೂ 2ನೇ ಸ್ಥಾನದಲ್ಲಿ ಬಿಜೆಪಿ (ಮೈ.ವಿ. ರವಿಶಂಕರ್ ) ಇದ್ದು, ಜೆಡಿಎಸ್‌ನ ಎಚ್.ಕೆ. ರಾಮು 3ನೇ ಸ್ಥಾನದಲ್ಲಿದ್ದಾರೆ ಎಂಬುದು ತಿಳಿದು ಬಂದಿದೆ.

28 ಟೇಬಲ್ಗಳಲ್ಲಿ ಎಣಿಕೆ ನಡೆಯುತ್ತಿದ್ದು, ಪ್ರತಿ ಟೇಬಲ್ಗಳಲ್ಲೂ ನೂರು ಮತಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲಿ ಬಹುತೇಕ ಮತಗಳು ಕಾಂಗ್ರೆಸ್ ಪಾಲಾಗಿವೆ. ಬಿಜೆಪಿಯಿಂದಲೂ ತೀವ್ರ ಪೈಪೋಟಿ ಕಂಡುಬಂದಿದೆ. ರೈತ- ದಲಿತ ಚಳವಳಿಗಳ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪ್ರಸನ್ನ ಎನ್. ಗೌಡ ಅವರಿಗೂ ಪ್ರಥಮ ಪ್ರಾಶಸ್ತ್ಯದ ಮತಗಳು ಸಿಕ್ಕಿವೆ.

ಕಾಂಗ್ರೆಸ್ ಪಕ್ಷಕ್ಕೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡಿದವರು ಬಿಜೆಪಿಗೆ 2ನೇ ಪ್ರಾಶಸ್ತ್ಯದ ಮತಗಳನ್ನು ಕೊಟ್ಟಿರುವುದು ಕಂಡುಬಂದಿದ್ದು. ಬಿಜೆಪಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿದವರಲ್ಲಿ ಹೆಚ್ಚಿನವರು 2ನೇ ಪ್ರಾಶಸ್ತ್ಯದ ಮತಗಳನ್ನು ಕಾಂಗ್ರೆಸ್ಗೆ ನೀಡಿದ್ದಾರೆ. ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದು ಮಧು. ಜಿ ಮಾದೇಗೌಡ ಗೆಲ್ಲುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Donate Janashakthi Media

Leave a Reply

Your email address will not be published. Required fields are marked *