ಉತ್ತರ ಪ್ರದೇಶ: ದಲಿತ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ, ಶಾಲೆಯಿಂದ ಹೊರದಬ್ಬಿದ ವ್ಯಕ್ತಿ

ಭದೋಹಿ: ಶಾಲೆಯೊಂದರಲ್ಲಿ ಶಾಲಾ ಸಮವಸ್ತ್ರ ಧರಿಸದಿದ್ದ ದಲಿತ ವಿದ್ಯಾರ್ಥಿನಿಯೊಬ್ಬಳ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯೊಬ್ಬ ಆಕೆಯನ್ನು ಶಾಲೆಯಿಂದ ಹೊರದಬ್ಬಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ವಿದ್ಯಾರ್ಥಿನಿಯೊಂದಿಗೆ ಅತ್ಯಂತ ಅಸಭ್ಯವಾಗಿ ವರ್ತಿಸಿದ್ದು ಶಾಲೆಯ ಶಿಕ್ಷಕರು ಅಲ್ಲ, ಆಡಳಿತಾಧಿಕಾರಿಗಳು ಅಲ್ಲ, ಬದಲಾಗಿ ಗ್ರಾಮದ ಮಾಜಿ ಮುಖ್ಯಸ್ಥ ಮನೋಜ್ ಕುಮಾರ್ ದುಬೆ ಎಂಬ ವ್ಯಕ್ತಿ. ಆತ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಮನೋಜ್‌ ಕುಮಾರ್‌ ದುಬೆ ಶಾಲೆಯೊಂದಿಗೆ ಯಾವ ಸಂಬಂಧವಿಲ್ಲದಿದ್ದರೂ ಸಹ ಪ್ರತಿದಿನವು ಶಾಲೆಗೆ ಹೋಗಿ ಅಲ್ಲಿನ ವಿದ್ಯಾರ್ಥಿಗಳು ಶಿಕ್ಷಕರ ಜತೆ ಕೆಟ್ಟದಾಗಿ ವರ್ತಿಸುತ್ತಿದ್ದ ಇಲ್ಲಿನ ಸರ್ಕಾರಿ ಶಾಲೆಯೊಂದಕ್ಕೆ ಭೇಟಿ ನೀಡಿದ ಆತ ಎಂಟನೇ ತರಗತಿಯ ವಿದ್ಯಾರ್ಥಿನಿಯನ್ನು ಯಾಕೆ ಶಾಲಾ ಸಮವಸ್ತ್ರ ಧರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ ಎಂದು ಚೌರಿ ಪೊಲೀಸ್ ಠಾಣೆಯ ಅಧಿಕಾರಿಯಾದ ಗಿರಿಜಾ ಶಂಕರ್ ಯಾದವ್ ಹೇಳಿದ್ದಾರೆ.

ದುಬೆ ಪ್ರಶ್ನೆಗೆ ವಿದ್ಯಾರ್ಥಿನಿಯು ಶಾಲಾ ಸಮವಸ್ತ್ರ ಖರೀದಿ ಮಾಡಿಲ್ಲ. ಅಪ್ಪ ನನಗೆ ತಂದುಕೊಟ್ಟ ನಂತರ ನಾನು ಸಮವಸ್ತ್ರ ಧರಿಸಿ ಬರುವೆ ಎಂದು ಹೇಳಿದ್ದಾಳೆ. ಇದನ್ನು ಕೇಳಿದೊಡನೆ ದುಬೆ ಬಾಲಕಿ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಬೈದಿದ್ದಾನೆ. ನಂತರ ಆಕೆಯನ್ನು ಶಾಲೆಯಿಂದ ಹೊರದಬ್ಬಿದ್ದಾರೆ ಎಂದು ಗಿರಿಜಾ ಶಂಕರ್‌ ಯಾದವ್ ಹೇಳಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ, ಮತ್ತೊಂದು ಪ್ರಕರಣ ಜರುಗಿತ್ತು. ಉತ್ತರ ಪ್ರದೇಶದ  ಮುಜಾಫರ್ ನಗರದಲ್ಲಿ ಗ್ರಾಮದ ಮುಖ್ಯಸ್ಥ ದಲಿತ ವ್ಯಕ್ತಿಯೊಬ್ಬರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಹಲ್ಲೆ ನಡೆಸಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಗ್ರಾಮದ ಮುಖ್ಯಸ್ಥ ಶಕ್ತಿ ಮೋಹನ್​​ನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ  ಶೋಧ ನಡೆಸುತ್ತಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *