ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ; ವಿದ್ಯಾರ್ಥಿಗಳ ಸಂಖ್ಯೆ ಕುಸಿತ

ಚಾಮರಾಜನಗರ: ಹೊಮ್ಮ ಸರ್ಕಾರಿ ಶಾಲೆಯಲ್ಲಿ ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆಯಲ್ಲಿ, ಪೋಷಕರು ಟಿಸಿ ಪಡೆದು ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿರುವ ಘಟನೆ ನಡೆದಿದೆ. ಅಡಿಗೆ

ಇದೀಗ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಒಂದಕ್ಕೆ ಕುಸಿತವಾಗಿದೆ. ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಟಿಸಿ ಪಡೆದು ಪೋಷಕರು ಮಕ್ಕಳನ್ನು ಬೇರೆ ಬೇರೆ ಶಾಲೆಗೆ ಸೇರಿಸಿದ್ದಾರೆ.

ಇದನ್ನೂ ಓದಿ: ಜಮೀರ್ ಅಹ್ಮದ್ ನಿವಾಸಕ್ಕೆ ಮುತ್ತಿಗೆ ಯತ್ನ; ಕನ್ನಡ ಪರ ಹೋರಾಟಗಾರರ ಬಂಧನ

ಹಾಗಾಗಿ ಇದೀಗ ಹೊಮ್ಮ ಸರ್ಕಾರಿ ಪ್ರಾಥಮಿಕ ಶಾಲೆ ಮುಚ್ಚುವ ಹಂತಕ್ಕೆ ಬಂದಿದೆ.

ಕಳೆದ 2024 25 ನೇ ಶೈಕ್ಷಣಿಕ ವರ್ಷದಲ್ಲಿ 22 ವಿದ್ಯಾರ್ಥಿಗಳಿದ್ದರು. ಈಗಾಗಲೇ ಪೋಷಕರು 12 ವಿದ್ಯಾರ್ಥಿಗಳ ಟಿಸಿ ಪಡೆದಿದ್ದಾರೆ ಉಳಿದವರಿಂದಲೂ ಟಿಸಿ ಪಡೆಯಲು ಶಾಲೆಗೆ ಅರ್ಜಿ ಸಲ್ಲಿಕೆಯಾಗಿದೆ. ಶಾಲೆಯಲ್ಲಿ ಇದೀಗ ಕೇವಲ ಒಬ್ಬ ವಿದ್ಯಾರ್ಥಿ ಮತ್ತು ಇಬ್ಬರು ಶಿಕ್ಷಕರು ಮಾತ್ರ ಇದ್ದಾರೆ.

ಈ ಹಿಂದೆ ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿಲ್ಲ ಎಂದು ಪ್ರತಿಭಟನೆ ನಡೆಸಿದ್ದರು. ಸರ್ಕಾರಿ ಶಾಲೆ ಶಿಕ್ಷಕರ ವಿರುದ್ಧ ಪೋಷಕರು ಪ್ರತಿಭಟನೆ ಮಾಡಿದ್ದರು. ಆದರೆ ಇದೀಗ ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಗೊಂಡಿದ್ದಕ್ಕೆ ಟಿಸಿ ಪಡೆದುಕೊಂಡು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ನೋಡಿ: ಕೌಶಲ್ಯದ ಹೆಸರಲ್ಲಿ ಕಾರ್ಮಿಕ ಮಂಡಳಿಯ ಹಣ ವ್ಯಯ – ಕಾರ್ಮಿಕ ಸಂಘಟನೆಗಳ ಆಕ್ಷೇಪ

Donate Janashakthi Media

Leave a Reply

Your email address will not be published. Required fields are marked *