ಕೊಪ್ಪಳ: ಜಿಲ್ಲೆಯ ಕೆ. ಕಟ್ಟಾಪುರ ಗ್ರಾಮದಲ್ಲಿ ದಲಿತ ಯುವಕನಿಗೆ ಜಾತಿ ನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮಾದಿಗ ಸಮುದಾಯದ ಹನುಮಂತ ಹಲ್ಲೆಗೊಳಗಾದ ಯುವಕನೆಂದು ಗುರುತಿಸಿಲಾಗಿದೆ. ಗ್ರಾಮದ ನಿವಾಸಿಗಳಾದ ಮಂಜಪ್ಪ, ಬರೆಪ್ಪ, ಮೌನೇಶ್, ದುರುಗೇಶಪ್ಪ, ಪ್ರಕಾಶ ಹಲ್ಲೆ ಮಾಡಿದವರು ಎನ್ನಲಾಗಿದೆ. ಇವರ ವಿರುದ್ಧ ಪ್ರಕರಣ ದಾಖಲಾಗಿದೆ.
ಹೊಲದಿಂದ ಮನೆ ಕಡೆಗೆ ಹೋಗುವಾಗ ಮಾರ್ಗದಲ್ಲಿ ಗ್ರಾಮದ ಯುವಕರು ಮದ್ಯ ಸೇವಿಸಿ ಕುಳಿತಿದ್ದರು. ಏಕಾಏಕಿ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಹನುಮಂತ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಜಮೀನನ್ನು ನೀವು ಯಾವಾಗ ಹಿಂದಿರುಗಿಸುತ್ತೀರಿ ಎಂದು ಬಿಜೆಪಿ ಹಾಗೂ ಆರೆಸ್ಸೆಸ್ ನಾಯಕರನ್ನು ಪ್ರಶ್ನಿಸಿದ ಎನ್.ಎಸ್.ಭೋಸರಾಜು
ಯುವಕರು ಹಲ್ಲೆ ಮಾಡುತ್ತಿದ್ದಂತೆ ಚೀರಾಡುತ್ತಿದ್ದ ಹನುಮಂತನ ಧ್ವನಿ ಕೇಳಿ ಅವರ ಸಹೋದರ ಜಗಳ ಬಿಡಿಸಲು ಬಂದರು. ಈ ವೇಳೆ ಅಣ್ಣನ ಮೇಲೆಯೂ ಹಲ್ಲೆ ಮಾಡಿದ್ದಾರೆ. ಸುತ್ತಮುತ್ತಲಿನ ಜನರು ಬರುವುದನ್ನು ನೋಡಿ ಆರೋಪಿಗಳು ಸ್ಥಳದಿಂದ ಪರಾರಿಯಾದರು ಎನ್ನಲಾಗಿದೆ.
ಹಲ್ಲೆಗೊಳಗಾದ ಯುವಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಪದೆ ಪದೇ ನಡೆಯುತ್ತಿವೆ, ಒಂದು ಪ್ರಕರಣವನ್ನು ಮರೆಯುವುದಕ್ಕಿಂದ ಮುಂಚೆ ಮತ್ತೊಂದು ಪ್ರಕರಣ ಬೆಳಕಿಗೆ ಬರುತ್ತಿದೆ. ಇದಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿರ್ಲಕ್ಷ್ಯ ಕಾರಣ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.
ಇದನ್ನೂ ನೋಡಿ: ಕಲಬುರಗಿ | ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ Janashakthi Media