ಅಮೇಥಿ : ಉತ್ತರ ಪ್ರದೇಶದ ಅಮೇಥಿಯಲ್ಲಿ 16 ವರ್ಷದ ದಲಿತ ಬಾಲಕಿಗೆ ಅಮಾನವಿಯವಾಗಿ ಥಳಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೈಂಗಿಕ ದೌರ್ಜನ್ಯ, ಹಾಗೂ ಥಳಿತಕ್ಕೆ ಒಳಗಾದ ಸಂತ್ರಸ್ತೆ ಅಮೇಥಿ ಜಿಲ್ಲೆಯ ಸಂಗ್ರಾಮ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದವರಾಗಿದ್ದಾರೆ.
ರಾಯ್‌ಪುರ ಫುಲ್ವಾರಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಪೊಲೀಸರು ಬಾಲಕಿಯನ್ನು ಸಂಪರ್ಕಿಸಿ ಆಕೆಯ ತಂದೆ ನೀಡಿದ ಮಾಹಿತಿ ಆಧಾರದ ಮೇಲೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಆರೋಪಿಗಳಾದ ಸೂರಜ್ ಸೋನಿ, ಶಿವಂ ಮತ್ತು ಸಕಲ್ ವಿರುದ್ಧ ಅಮೇಥಿ ಉಪಾಧೀಕ್ಷಕರಾದ ಸೂರಜ್ ಸೋನಿ, ಶಿವಂ ಮತ್ತು ಸಕಲ್ ವಿರುದ್ಧ ಪೋಕ್ಸೊ ಕಾಯ್ದೆಯಡಿ, ಎಸ್‌ಸಿ ಮತ್ತು ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿ ಅರ್ಪಿತ್ ಕಪೂರ್ ಹೇಳಿದ್ದಾರೆ.
ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ, ಬಾಲಕೀಯರ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆಗಳು ನಡೆಯುತ್ತಲೇ ಇವೆ. ವಿಶೇಷವಾಗಿ ತಳ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ರೀತಿಯ ದೌರ್ಜನ್ಯ, ದಬ್ಬಾಳಿಕೆ ನಡೆಸಲಾಗುತ್ತಿದೆ. ಯೋಗಿ ಸರಕಾರದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ ಎಂಬುದು ದಿನೇ ದಿನೇ ಸಾಬೀತಾಗುತ್ತಿದೆ.