ಮೈಸೂರು : ದಲಿತ ಹೋರಾಟಗಾರ, ಚಿಂತಕ, ಬರಹಗಾರ ಹಾಗೂ ಪತ್ರಕರ್ತ ಹಾರೋಹಳ್ಳಿ ರವೀಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ವರುಣದಲ್ಲಿ ರವೀಂದ್ರ ಅವರನ್ನು ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ಬಂಧಿಸಿದ್ದು, ಚಿಕ್ಕೊಡಿಗೆ ಕರೆದುಕೊಂಡು ಹೋಗುತ್ತಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ. ಹಳೆಯ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
“2017ರಲ್ಲಿ ಮಾಡಲಾದ ಪೇಸ್‌ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯಲ್ಲಿ ಪ್ರಕರಣ ದಾಖಲಾಗಿತ್ತು. ರವೀಂದ್ರ ಅವರು 2019ರಿಂದಲೂ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹಾಗಾಗಿ ಅವರನ್ನು ಬಂಧಿಸುವಂತೆ ಕೋರ್ಟ್ ಆದೇಶಿಸಿತ್ತು ಎಂದು ತಿಳಿದು ಬಂದಿದೆ.
2017ರಲ್ಲಿ ಸಂಸದ ಅನಂತ್‌ಕುಮಾರ್ ಹೆಗಡೆ, “ಜಾತ್ಯತೀತರಿಗೆ ಅಪ್ಪ ಅಮ್ಮ ಇಲ್ಲ” ಎಂದು ಹೇಳಿಕೆ ನೀಡಿದ್ದರು. ಹೆಗಡೆ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದವು. ಆಗ ಹಾರೋಹಳ್ಳಿಯವರು ಕಟುವಾಗಿ ಪೋಸ್ಟ್ ಹಾಕಿದ್ದರು. ಹಿಂದೂ ದೇವರುಗಳಿಗೆ ಅಪಮಾನ ಮಾಡಲಾಗಿದೆ ಎಂದು ರವೀಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.