ಶಿವಮೊಗ್ಗ: ಆಗಸ್ಟ್ 21ರ ಬೆಳಗಿನ ಜಾವ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಧ್ವಂಸ ಮಾಡಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ ಪಂಡರಹಳ್ಳಿಯ ನಿವಾಸಿಗಳಾದ ಗಣೇಶ (24) ಹಾಗೂ ವಿನಯ್ (25) ಬಂಧಿತರು ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಗುರುವಾರ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿ:ಹೊಳೆಹೊನ್ನೂರಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು
ಆಗಸ್ಟ್ 20ರಂದು ಭಾನುವಾರ ತಡ ರಾತ್ರಿ ಆರೋಪಿಗಳು ಪಂಡರಹಳ್ಳಿಯಿಂದ ಹೊಳೆಹೊನ್ನೂರು ಮಾರ್ಗವಾಗಿ ಜೋಗ ಜಲಪಾತ ವೀಕ್ಷಣೆಗೆ ಹೊರಟಿದ್ದರು.ಬೆಳಗಿನ ಜಾವ ದಾರಿ ಮಧ್ಯೆ ಕೃತ್ಯ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.