ನವದೆಹಲಿ: ಬೆಲೆ ಏರಿಕೆಯಿಂದಾಗಿ ಈಗಾಗಲೇ ಸಂಕಷ್ಟದಲ್ಲಿ ಮುಳುಗಿರುವ ಜನಸಾಮಾನ್ಯರೇ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಕೇಂದ್ರ ಸರ್ಕಾರ ಅಡುಗೆ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 14.2 ಕೆ.ಜಿ ಗ್ಯಾಸ್ ಸಿಲಿಂಡರ್ ಬೆಲೆ 999.50ಕ್ಕೆ ಏರಿಕೆಯಾಗಿದೆ.
ಹೊಸ ದರ ಇಂದಿನಿಂದಲೇ ಜಾರಿಗೆ ಬಂದಿದ್ದು, ಈ ಮೂಲಕ ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ದರ ಏರಿಕೆಯಾದಂತಾಗಿದೆ. ಮೇ 1ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹ 102.50 ಹೆಚ್ಚಿಸಲಾಗಿತ್ತು. ಪ್ರಸ್ತುತ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ₹ 2,355.50 ಇದೆ.
ಇದನ್ನು ಓದಿ: ಅಡುಗೆ ಅನಿಲ ದರ ಹೆಚ್ಚಳ , ಸಬ್ಸಿಡಿ ಸ್ಥಗಿತ
ಮಾರ್ಚ್ 22 ರಂದು ಕೊನೆಯ ಬಾರಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಮಾಡಲಾಗಿತ್ತು. ಆಗ ಬೆಲೆಯನ್ನು 50 ರೂ ಹೆಚ್ಚಳ ಮಾಡಲಾಗಿತ್ತು. ಏಪ್ರಿಲ್ ತಿಂಗಳಲ್ಲಿ ಈ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರಲಿಲ್ಲ.
ವ್ಯಾಟ್‌ನಂತಹ ಸ್ಥಳೀಯ ತೆರಿಗೆಗಳನ್ನು ಅವಲಂಬಿಸಿ ಬೆಲೆಗಳು ನಗರದಿಂದ ನಗರಕ್ಕೆ ಬದಲಾಗುತ್ತವೆ. ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದ ಜನರು ಈಗಾಗಲೇ ಹೆಣಗಾಡುತ್ತಿರುವ ಸಮಯದಲ್ಲಿ ಗ್ಯಾಸ್ನ ಬೆಲೆಯೂ ಏರಿಕೆಯಾಗಿದ್ದು, ಜನರ ಆತಂಕ ಹೆಚ್ಚಿಸಿದೆ.