ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಜೂನ್ 11 ರಂದು ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು, ಸುಮಾರು ಐದು ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದೀಗ ಕೊನೆಗೂ ದೀಪಾವಳಿಗೆ ದರ್ಶನ್‌ಗೆ ಸಿಹಿ ದೊರೆತಿದೆ. ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಕಳೆದ ಸುಮಾರು ಐದು ತಿಂಗಳಿಂದ ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್‌ಗೆ ದೀಪಾವಳಿ ಶುಭ ತಂದಿದೆ. ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್‌ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದ್ದು, ಮಧ್ಯಂತರ ಜಾಮೀನಿಗೆ ಸಾಕಷ್ಟು ಷರತ್ತುಗಳನ್ನು ಮಾನ್ಯ ನ್ಯಾಯಾಲಯ ವಿಧಿಸಿದೆ.

ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್‌ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್‌ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಅಲ್ಲ ಕರ್ನಾಟಕ ರಾಜ್ಯೋತ್ಸವ

ದರ್ಶನ್‌ಗೆ ತೀವು ಬೆನ್ನುನೋವಿನ ಸಮಸ್ಯೆ ಇದ್ದು ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವ್ಯದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಜಾಮೀನು ಸಿಗುವ ನಿರೀಕ್ಷೆಯಲ್ಲಿ ನಟ ದರ್ಶನ್ ಹೇಗಿರಲಿದೆ ದಾಸನ ಭವಿಷ್ಯ?

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್‌ರ ಆರೋಗ್ಯ ಸಮಸ್ಯೆಯ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಬೇಕೆಂಬ ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದರು. ಅಲ್ಲದೆ ಈಗ ಸಲ್ಲಿಸಲಾಗಿರುವ ವೈದ್ಯ ವರದಿಯಲ್ಲಿ ದರ್ಶನ್‌ಗೆ ಆಗಬೇಕಿರುವ ಶಸ್ತ್ರಚಿಕಿತ್ಸೆ, ಗುಣವಾಗಲು ತೆಗೆದುಕೊಳ್ಳುವ ಸಮಯ ನಿಖರವಾಗಿಲ್ಲವೆಂದು ವಾದಿಸಿದ್ದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ.

ದರ್ಶನ್‌ಗೆ ಹೆಚ್ಚಿನ ಷರತ್ತುಗಳನ್ನೇನೂ ನ್ಯಾಯಾಧೀಶರು ವಿಧಿಸಿಲ್ಲ. ಎಸ್‌ಪಿಪಿ ಮನವಿ ಮೇರೆಗೆ ಪಾಸ್‌ಪೋರ್ಟ್ ವಶಕ್ಕೆ ನೀಡುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ದರ್ಶನ್ ಇಚ್ಚಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಒಂದು ವಾರದ ಒಳಗಾಗಿ ನ್ಯಾಯಾಲಯಕ್ಕೆ ಚಿಕಿತ್ಸೆಯ ವಿವರಗಳನ್ನು ಸಲ್ಲಿಸಬೇಕಿದೆ.

ಇದನ್ನೂ ನೋಡಿ: ಸುಸ್ಥಿರ ಸಮಾಜಕ್ಕಾಗಿ ಸ್ವಚ್ಛ‌ ಪರಿಸರ ನಿರ್ಮಿಸೋಣ- ನಾಗೇಶ್ ಹೆಗಡೆ Janashakthi Media

Donate Janashakthi Media

Leave a Reply

Your email address will not be published. Required fields are marked *