ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಎಸ್​​ಎಸ್​​ಎಲ್​ಸಿ 2ನೇ ಪರೀಕ್ಷೆಗೆ ದಿನಾಂಕ ಘೋಷಣೆ!

ಬೆಂಗಳೂರು: ಏಪ್ರಿಲ್‌ 23ರ ಮಧ್ಯಾಹ್ನ 12 ಗಂಟೆಗೆ ಕರ್ನಾಟಕದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದಿದ್ದ ಈ ಪರೀಕ್ಷೆಗೆ ರಾಜ್ಯಾದ್ಯಂತ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದೆ. ಇಂದು 12ಗಂಟೆಗೆ ಶಿಕ್ಷಣ ಸಚಿವರು ಅಧಿಕೃತವಾಗಿ ಫಲಿತಾಂಶ ಬಿಡುಗಡೆ ಮಾಡಿದ್ದಾರೆ.

karresults.nic.in ಅಥವಾ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‌ಎಂಎಸ್ (SMS) ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026 ಅನ್ನು ಡಿಜಿಲಾಕರ್ ಮೂಲಕವೂ ಲಭ್ಯವಾಗುತ್ತಿದೆ.

ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ; ವೀಕ್ಷಿಸುವುದು ಹೇಗೆ?

Karnataka SSLC Results 2026 Live: ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದ ಹಳ್ಳಿ ಹೈದ

ಈ ಬಾರಿ ಎಸ್​​ಎಸ್​​ಎಲ್​ಸಿ ಫಲಿತಾಂಶ ಅದ್ಭುತವಾಗಿ ಬಂದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಣವೆಬಿಳಚಿಯ ಹಳ್ಳಿ ಹೈದ ಭರತ್‌ಗೆ 625ಕ್ಕೆ 625 ಅಂಕ ಬಂದಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಣವೆಬಿಳಚಿಯ ಕಬ್ಬಳ ಗ್ರಾಮದ ಶ್ರೀ ವಿದ್ಯಾಲಕ್ಷ್ಮೀ ಕಾನ್ವೆಂಟ್ ಸ್ಕೂಲ್ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾನೆ. ಬಿಲ್ಡಿಂಗ್ ಕಾಂಟ್ರ್ಯಾಕ್ಟರ್ ಆಗಿರುವ ಗಿರೀಶ್‌ರಾವ್ ಹಾಗೂ ಶಿಲ್ಪಾ ದಂಪತಿ ಪುತ್ರ ಭರತ್ ಈ ಸಾಧನೆ ಮಾಡಿದ್ದಾರೆ.

Karnataka SSLC Results 2026 Live: ತೃತೀಯ ಭಾಷೆಯಲ್ಲಿ ಅನುತ್ತೀರ್ಣ ಆದ ಮಕ್ಕಳಿಗೆ ಪರೀಕ್ಷಾ ಶುಲ್ಕ ಇಲ್ಲ

ಇನ್ನೂ ಎಸ್​​ಎಸ್​ಎಲ್​​ಸಿ ತೃತೀಯ ಭಾಷೆ ವಿಚಾರವಾಗಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಅನುತ್ತೀರ್ಣ ಆದ ಮಕ್ಕಳಿಗೆ ಪರೀಕ್ಷಾ ಶುಲ್ಕ ಇರೋದಿಲ್ಲ ಎಂದಿದ್ದಾರೆ.

ತೃತೀಯ ಭಾಷೆ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ. ತೃತೀಯ ಭಾಷೆಯಲ್ಲಿ 17 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ, ಅವರಿಗೆ ಯಾವುದೇ ಪರೀಕ್ಷಾ ಶುಲ್ಕ ಇರೋದಿಲ್ಲ.

ಮೇ.18 ರಿಂದ ಮೇ.25ಕ್ಕೆ ಎರಡನೇ ಪರೀಕ್ಷೆ

ಈ ಬಾರಿ ಶಿಕ್ಷಣ ಇಲಾಖೆ ಪ್ರಮುಖ ನಿರ್ಧಾರ ಕೈಗೊಂಡಿದೆ. ಶಿಕ್ಷಣ ಇಲಾಖೆ SSLC ಮೂರನೇ ಪರೀಕ್ಷೆ ಕೈ ಬಿಟ್ಟಿದೆ. SSLC ಎರಡನೇ ಪರೀಕ್ಷೆ ನಡೆಯಲಿದೆ. ಮೇ.18 ರಿಂದ ಮೇ.25ಕ್ಕೆ ಎರಡನೇ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ದಿನಾಂಕ ಘೋಷಣೆ ಮಾಡಿದ್ದಾರೆ.

ಇದನ್ನೂ ನೋಡಿ: ಬಗೆದಷ್ಟೂ..ಮುಗಿಯದ SIR ಬಗ್ಗಡ : ದೇಶದ ಜನರನ್ನೇ ಪರದೇಶಿಗಳನ್ನಾಗಿಸುತ್ತಿದೆ Janashakthi Media

Donate Janashakthi Media

Leave a Reply

Your email address will not be published. Required fields are marked *