ಪಕ್ಷದ ಭವಿಷ್ಯದ ಪಾತ್ರ ಹಾಗೂ ಹೊಸ ಸಚಿವ ಸಂಪುಟ ಕುರಿತು ಚರ್ಚೆ ಸಾಧ್ಯತೆ
ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದಾರೆ. ರಾಜೀನಾಮೆ
ಸಿದ್ದರಾಮಯ್ಯ ಅವರೊಂದಿಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ದೆಹಲಿಗೆ ತೆರಳಿದ್ದು, ಪಕ್ಷದ ಮುಂದಿನ ರಾಜಕೀಯ ಬೆಳವಣಿಗೆಗಳು ಹಾಗೂ ತಮ್ಮ ಭವಿಷ್ಯದ ಪಾತ್ರ ಕುರಿತು ಚರ್ಚೆ ನಡೆದಿರಬಹುದು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಸಿದ್ದರಾಮಯ್ಯ ಸುದ್ದಿಗೋಷ್ಠಿ | ರಾಜೀನಾಮೆ ಬಳಿಕ ಮೊದಲ ಪ್ರತಿಕ್ರಿಯೆ
ರಾಜ್ಯಸಭೆ ಸ್ಥಾನವನ್ನು ತಿರಸ್ಕರಿಸಿರುವ ಸಿದ್ದರಾಮಯ್ಯ, ರಾಷ್ಟ್ರೀಯ ರಾಜಕೀಯಕ್ಕಿಂತ ಕರ್ನಾಟಕ ರಾಜಕೀಯದಲ್ಲೇ ಸಕ್ರಿಯವಾಗಿರಲು ಆಸಕ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ಹೊಸ ಸರ್ಕಾರದ ಸಚಿವ ಸಂಪುಟ ರಚನೆ, ತಮ್ಮ ಆಪ್ತರಿಗೆ ಸ್ಥಾನಮಾನ ಹಾಗೂ ಪುತ್ರ ಯತೀಂದ್ರ ಅವರಿಗೆ ಜವಾಬ್ದಾರಿ ನೀಡುವ ವಿಚಾರಗಳೂ ಚರ್ಚೆಗೆ ಬಂದಿರಬಹುದು ಎಂದು ವರದಿಯಾಗಿದೆ.
ಇದಕ್ಕೂ ಮುನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದು, ಸಚಿವ ಸಂಪುಟವೂ ವಿಸರ್ಜನೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಈಗ ಹೊಸ ನಾಯಕತ್ವದ ರೂಪುರೇಷೆಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದೆ. ರಾಜೀನಾಮೆ
