ರಾಮನಗರ: ದಯಾನಂದ ಸಾಗರ್ ವಿವಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣವಾದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ಪತ್ರ (ಎಸ್‌ಎಫ್‌ಐ) ಬರೆದಿದ್ದಾರೆ.
ಜಿಲ್ಲೆಯ ಹಾರೋಹಳ್ಳಿಯಲ್ಲಿ ಇರುವ ದಯಾನಂದ ಸಾಗರ್ ವಿಶ್ವವಿದ್ಯಾಲಯದಲ್ಲಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಅನಾಮಿಕ ವೀನಿತ್ ಎಂಬ ವಿದ್ಯಾರ್ಥಿನಿ ಕಾಲೇಜಿನಲ್ಲಿ ಆತ್ಮಹತ್ಯೆ ಮಾಡಿಕೊಂದ್ದಾರೆ. ಆತ್ಮಹತ್ಯೆ ಮೊದಲು ಜನವರಿ ತಿಂಗಳಲ್ಲಿ ತಂದೆಗೆ ಕರೆ ಮಾಡಿ ವಿದ್ಯಾಭ್ಯಾಸ ಮಾಡಲು ಆಗುತ್ತಿಲ್ಲ ಕಾಲೇಜಿನಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿಸಿರುತ್ತಾರೆ, ಅವರ ತಂದೆ ಹೊಂದಾಣಿಕೆ ಮಾಡಿಕೊಂಡು ವಿದ್ಯಾಭ್ಯಾಸ ಮಾಡು ಎಂದು ಮನವಲಿಸಿರುತ್ತಾರೆ. ನಂತರ ಫೆಬ್ರವರಿ 4 ರಂದು ತಂದೆಗೆ ಮದ್ಯಾಹ್ನ ಕರೆ ಮಾಡಿ ಕಾಲೇಜಿನಲ್ಲಿ ಪ್ರಾಂಶುಪಾಲರು ಮತ್ತು ಸುಜಿತಾ ಮುಕ್ಕಿರಿ ಎಂಬ ಶಿಕ್ಷಕಿ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾರೆ ಮತ್ತು ನನಗೆ ವಿದ್ಯಾಭ್ಯಾಸ ಮಾಡಲು ಆಗುತ್ತಿಲ್ಲ ಎಂದು ತಿಳಿಸಿರುತ್ತಾರೆ. ನಂತರ ಫೆಬ್ರವರಿ 4 ರಂದು ರಾತ್ರಿ ಸುಮಾರು 9 ಗಂಟೆಗೆ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ವಿದ್ಯಾರ್ಥಿನಿ ಸಾವಿನ ಕಾರಣವನ್ನು ಕುರಿತು ಎರಡು ಪತ್ರಗಳನ್ನು ಬರೆದಿದ್ದು ಅದರಲ್ಲಿ ಒಂದು ಪತ್ರವನ್ನು ಮಾತ್ರ ಕಾಲೇಜಿನ ಆಡಳಿತ ಮಂಡಳಿ ಪೊಲೀಸರಿಗೆ ನೀಡಿದ್ದು ಸಾವಿನ ಕಾರಣವನ್ನು ಬರೆದಿದ್ದ ಮತ್ತೊಂದು ಪತ್ರವನ್ನು ದಯಾನಂದ ಸಾಗರ್ ವಿಶ್ವ ವಿದ್ಯಾಲಯದ ಆಡಳಿತ ಮಂಡಳಿ ಅವರು ಪೊಲೀಸರಿಗೆ ನೀಡದೆ ತನಿಖೆಯನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಿರುತ್ತಾರೆ. ಈ ಆತ್ಮಹತ್ಯೆಯ ಹಿಂದೆ ವಿಶ್ವವಿದ್ಯಾಲಯ ಆಡಳಿತ ಮಂಡಳಿಯ ಕೈವಾಡ ಇದೆ ಎಂಬುದು ಸ್ಪಷ್ಟವಾಗಿದೆ.
ಈ ಘಟನೆ ನಡೆದ ಬಳಿಕ SFI ನಿಯೋಗ ದಯಾನಂದ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದಾಗ ಕಾಲೇಜು ಪ್ರಾಂಶುಪಾಲರು ಮತ್ತು ಶಿಕ್ಷಕರು ವಿದ್ಯಾರ್ಥಿನಿಯರ ನಡತೆಯ ಬಗ್ಗೆ ಎಲ್ಲರ ಮುಂದೆ ಮಾತನಾಡುತ್ತಾರೆ ಮತ್ತು ವಿದ್ಯಾರ್ಥಿನಿಯನ್ನು ಯಾವ ಹುಡುಗನನ್ನು ಮೆಚ್ಚಿಸಲು ಶೃಂಗಾರ ಮಾಡಿಕೊಂಡು ಬಂದಿದ್ದೀಯಾ ಈ ರೀತಿ ಮಾತನಾಡುವುದಲ್ಲದೆ ಹಲವಾರು ವಿದ್ಯಾರ್ಥಿನೀಯ ಶೀಲದ ಬಗ್ಗೆ ಎಲ್ಲರ ಮುಂದೆ ಪ್ರಶ್ನೆ ಮಾಡುತ್ತಾರೆ. ಈ ಕಿರುಕುಳ ನಿರಂತರವಾಗಿ ನಡೆಯುತ್ತಿದೆ ಎಂದು ತಮ್ಮ ನೋವನ್ನು ಹೇಳಿಕೊಂಡಿರುತ್ತಾರೆ
ಈ ಆತ್ಮಹತ್ಯೆಯು ನರ್ಸಿಂಗ್ ವಿಭಾಗದ ಪ್ರಾಂಶುಪಾಲರ, ಶಿಕ್ಷಕರ ಮತ್ತು ಆಡಳಿತ ಮಂಡಳಿಯ ಪ್ರೇರಣೆಯಿಂದ ಆಗಿದೆ. ಇದನ್ನು ಸೂಕ್ತ ತನಿಖೆ ಮಾಡುವಂತೆ ಒತ್ತಾಯಿಸುತ್ತದೆ. ಜೊತೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ಸಮಿತಿ ರಚನೆಯನ್ನು ಮಾಡಿ ವಿಶ್ವ ವಿದ್ಯಾಲಯಕ್ಕೆ ತೆರಳಿ ತನಿಖೆಯನ್ನು ಮಾಡಿ ದಯಾನಂದ ಸಾಗರ್ ವಿಶ್ವ ವಿದ್ಯಾಲಯದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ಒತ್ತಾಯಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.