ಮಂಗಳೂರು: ಕೋಕ್ ಸಲ್ಫರ್ ಘಟಕ ಸೇರಿದಂತೆ ಎಂಆರ್‌ಪಿಎಲ್‌ನಿಂದ ಉಂಟಾಗುತ್ತಿರುವ ಮಾಲಿನ್ಯದಿಂದ ಜನಸಾಮಾನ್ಯರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮಗಳು ಬೀಳುತ್ತಿದ್ದರೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಯಾವುದೇ ಕಾಳಜಿ ಇಲ್ಲ ಎಂದು ಆರೋಪಿಸಿ ಹೋರಾಟಗಾರ ಮುನೀರ್ ಕಾಟಿಪಳ್ಳ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜನರಿಗಿಂತ
ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ವತಿಯಿಂದ ಕೋಕ್ ಸಲ್ಫರ್ ಘಟಕದ ಮುಂಭಾಗ ಹಮ್ಮಿಕೊಳ್ಳಲಾಗಿರುವ ಅನಿರ್ದಿಷ್ಟ ಧರಣಿಯಯು ಮೂರನೇ ದಿನಕ್ಕೆ ಕಾಲಿಟ್ಟಿದೆ. ಧರಣಿ ಸಭೆಯಲ್ಲಿ ಮಾತನಾಡಿದ ಅವರು, ಎಂಆರ್‌ಪಿಎಲ್ ಸೇರಿದಂತೆ ಮಾಲಿನ್ಯಕಾರಕ ಕೈಗಾರಿಕೆಗಳ ಹಿತ ಕಾಪಾಡಲು ಮಾತ್ರ ಜಿಲ್ಲಾಡಳಿತ ಮುಂದಾಗುತ್ತಿದೆ ಎಂದು ದೂರಿದರು.
ಜೋಕಟ್ಟೆ ಹಾಗೂ ಕೆಂಜಾರು ಭಾಗದ ಗ್ರಾಮಸ್ಥರು ನರಕಸದೃಶ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಭೂಸ್ವಾಧೀನ ಮತ್ತು ಪುನರ್ವಸತಿ ಪ್ರಕ್ರಿಯೆಯಲ್ಲಿ ಜಿಲ್ಲಾಡಳಿತ ಅನಗತ್ಯ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಅಂತಿಮಗೊಂಡಿರುವ ಒಪ್ಪಂದದ ಪ್ರಕಾರ ಹಸಿರು ವಲಯ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಕೈಗೊಂಡು ಸಂತ್ರಸ್ತರಿಗೆ ಶೀಘ್ರ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿದರು. ಜನರಿಗಿಂತ
ಇದನ್ನೂ ಓದಿ : ಎಸ್‌ಐಆರ್ ವಿರುದ್ಧ ನಾಗರಿಕ ಸಂಘಟನೆಗಳ ಆಕ್ರೋಶ ; ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ
ಭೂಸ್ವಾಧೀನ ಮತ್ತು ಪುನರ್ವಸತಿ ಕಾರ್ಯಕ್ಕೆ ಕಂಪನಿ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾಧಿಕಾರಿಗಳ ಸೂಚನೆಯಂತೆ ಮುಂದುವರಿಯುವುದಾಗಿ ಎಂಆರ್‌ಪಿಎಲ್ ಹೇಳಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಮ್ಮ ಧೋರಣೆ ಬದಲಿಸಿಕೊಂಡು ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದರು.
ಧರಣಿಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಈಶ್ವರ್ ಕಟೀಲ್, ನಾಗರಿಕ ಹೋರಾಟ ಸಮಿತಿ ಸಹ ಸಂಚಾಲಕ ಅಬೂಬಕ್ಕರ್ ಬಾವ, ಪತ್ರಕರ್ತ ನವೀನ್ ಸೂರಿಂಜೆ, ಶ್ರೀನಾಥ್ ಕುಲಾಲ್, ಜೋಕಟ್ಟೆ ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂಸು ಇದ್ದಿನಬ್ಬ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದನ್ನೂ ನೋಡಿ : ಸಾರಿಗೆ ನೌಕರರ ಮುಷ್ಕರ | 25% ವೇತನ ಹೆಚ್ಚಳ : ಸರಕಾರ ಯಾಕೆ ಒಪ್ಪುತ್ತಿಲ್ಲ? | ಎಸ್ ವರಲಕ್ಷ್ಮಿ Janashakthi Media
