ಬೆಂಗಳೂರು: ಉಪಮುಖ್ಯಮಂತ್ರಿ, ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ಮುಂದುವರೆಸಿದ್ದಾರೆ. ನಗರದ ಹೆಬ್ಬಾಳ ಮೇಲ್ಸೇತುವೆ ಬಳಿ ಇಂದು ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿ ಪ್ರತಿನಿತ್ಯ ಹೆಚ್ಚಿನ ಸಂಚಾರಕ್ಕೆ ಕಾರಣಗಳೇನು ಎಂದು ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯ ಬಗ್ಗೆ ವಿವರಣೆ ನೀಡಿದ್ದಾರೆ.
ಅಧಿಕಾರಿಗಳ ಸಮಸ್ಯೆ ಆಲಿಸಿದ ಅವರು ಸಂಚಾರ ದಟ್ಟಣೆಯನ್ನು ತಪ್ಪಿಸಲು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಬಗ್ಗೆ ಕೂಡ ಚರ್ಚೆ ನಡೆಸಿದ್ದಾರೆ. ನಗರದಲ್ಲಿ ಟ್ರಾಫಿಕ್ ದಟ್ಟಣೆ ಸಮಸ್ಯೆಯನ್ನು ತಿಳಿಯಲು ಅವರು ನಗರದ ಹಲವು ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಮೋದಿ ಬರುತ್ತಾರೆ-ಹೋಗುತ್ತಾರೆ ಕಾಲೇಜುಗಳಿಗೆ ರಜೆ ಏಕೆ…?: ಡಿ ಕೆ ಶಿವಕುಮಾರ್ ಪ್ರಶ್ನೆ
ಕಾಮಗಾರಿಗಳ ಪರಿಶೀಲನೆ ನಡೆಸಿ ಸಂಚಾರ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿ. ವಿಮಾನ ನಿಲ್ದಾಣ, ಹೈದರಾಬಾದ್ ಹಾಗೂ ಐಟಿ ಹಬ್ ಗಳನ್ನು ಸಂಪರ್ಕಿಸುವ ಹೆಬ್ಬಾಳ ಮೇಲ್ಸೇತುವೆ ಅಗಲೀಕರಣಕ್ಕೆ ಸಾಕಷ್ಟು ಬೇಡಿಕೆಗಳು ಕೇಳಿಬಂದಿದ್ದು ಉದ್ದೇಶಿತ ಯೋಜನೆಯ ನೀಲನಕ್ಷೆಗಳನ್ನು ಈ ವೇಳೆ ವೀಕ್ಷಿಸಿ, ಮಾಹಿತಿ ಪಡೆದುಕೊಂಡಿದ್ದಾರೆ.