ಬೆಂಗಳೂರು: ರಾಜ್ಯದಲ್ಲಿ ಐದು ವರ್ಷದ ಒಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಯಾವುದೇ ಲಸಿಕೆ ಇದ್ದರೂ ಅದನ್ನು ಹಾಕಲು ಹಾಗೂ ಉತ್ತೇಜಿಸಲು ಸರ್ಕಾರ ಕೈಗೊಂಡ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಸೋಮವಾರ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಚಾಲನೆ ನೀಡಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶಾಂತಿನಗರದ ಆಸ್ಟಿನ್ ಟೌನ್ ಹೆರಿಗೆ ಆಸ್ಪತ್ರೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಚಾಲನೆ ನೀಡಿದರು.
ಇದನ್ನೂ ಓದಿ:ಗೃಹ ಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಬಿಎಂಪಿ ಅಂಗನವಾಡಿ, ಆರೋಗ್ಯ ಕೇಂದ್ರ ಮತ್ತು ಸಮುದಾಯ ಕೇಂದ್ರಗಳಲ್ಲಿ ಆರು ದಿನಗಳ ಕಾಲ 114 ಸಂಚಾರಿ ತಂಡಗಳು ಸೇರಿದಂತೆ ಒಟ್ಟು 1,067 ಲಸಿಕಾ ಶಿಬಿರಗಳನ್ನು ನಿಯೋಜಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ (ಆರೋಗ್ಯ) ಡಾ.ಕೆ.ವಿ.ತ್ರಿಲೋಕ್ ಚಂದ್ರ, ಜಂಟಿ ಆಯುಕ್ತ, ಮುಖ್ಯ ಆರೋಗ್ಯಾಧಿಕಾರಿ (ಸಾರ್ವಜನಿಕ ಆರೋಗ್ಯ) ಡಾ.ಬಾಲಸುಂದರ್, ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ಡಾ.ನಿರ್ಮಲಾ ಬುಗ್ಗಿ ಮತ್ತಿತರರು ಉಪಸ್ಥಿತರಿದ್ದರು.