ಬೆಂಗಳೂರು: ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಸಿಬ್ಬಂದಿಗಳ ಆರೋಪವಿದ್ದು, ಎಫ್‌ಡಿಎ, ಎಸ್‌ಡಿಎ ಸಿಬ್ಬಂದಿಗಳು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ವಿರುದ್ಧ 25ಕ್ಕೂ ಹೆಚ್ಚು ದೂರು ದಾಖಲಾಗಿದೆ. ಸದ್ಯದ ಬೆಳವಣಿಗೆ ಹಿನ್ನೆಲೆಯಲ್ಲಿ ನಿಶಾ ಜೇಮ್ಸ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಹೆಚ್ಚುವರಿ ಪೊಲೀಸ್ ಆಡಳಿತ ಮಹಾನಿರ್ದೇಶಕ ಎಂ ಎ ಸಲೀಂ ಅವರಿಗೆ ಎಫ್‌ಡಿಎ ಮತ್ತು ಎಸ್‌ಡಿಎ ಸಿಬ್ಬಂದಿಗಳು 13 ಪುಟಗಳ ದೂರನ್ನು ಸಲ್ಲಿಸಿದ್ದಾರೆ. ನಿಶಾ ಜೇಮ್ಸ್ ತಡರಾತ್ರಿಯವರೆಗೂ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ಆಕೆ ಹೊರಡುವವರೆಗೂ ಕಚೇರಿಯಲ್ಲಿ ಇರುವಂತೆ ಸಿಬ್ಬಂದಿಯನ್ನು ಒತ್ತಾಯಿಸುತ್ತಿದ್ದರು ಎಂದು ದೂರು ದಾಖಲಾಗಿವೆ.
ನಿಶಾ ಜೇಮ್ಸ್ ವಿರುದ್ಧ ಕೇಳಿ ಬಂದಿರುವ ಆರೋಪಗಳಲ್ಲಿ, ಸಾಮಾನ್ಯ ವಿಷಯಗಳನ್ನು ದೊಡ್ಡದಾಗಿ ಮಾಡಿ ಕಾನೂನುಬಾಹಿರವಾಗಿ ಶಿಸ್ತುಕ್ರಮಕ್ಕೆ ಮುಂದಾಗುತ್ತಾರೆ. ಉದ್ದೇಶಪೂರ್ವಕವಾಗಿ ಸಿಬ್ಬಂದಿಗಳನ್ನ ತಡರಾತ್ರಿವರೆಗೂ ಕಚೇರಿಯಲ್ಲಿಯೇ ಉಳಿಸಿಕೊಳ್ಳುತ್ತಾರೆ. ನಿಶಾ ಜೇಮ್ಸ್ ಸಂಜೆ 6 ರ ನಂತರ ಕೆಲಸ ಶುರುಮಾಡಿ ರಾತ್ರಿ 3ಕ್ಕೆ ಮುಗಿಸುತ್ತಾರೆ. ಇದರಿಂದ ಪತ್ನಿ ಮಕ್ಕಳು ಪೋಷಕರ ಜೊತೆ ಸಮಯ ಕಳೆಯಲು ಆಗುತ್ತಿಲ್ಲ. ಅವರ ಕಿರುಕುಳದಿಂದಾಗಿ ನಮಗೆ ನಿದ್ದೆ ಮಾಡಲು ಆಗುತ್ತಿಲ್ಲ. ನಿದ್ರಾಹೀನತೆಯಿಂದ ಮರೆವು ಸೇರಿದಂತೆ ಹಲವು ಕಾಯಿಲೆ ಬರುತ್ತಿವೆ ಎಂದು ದೂರುಗಳು ದಾಖಲಾಗಿವೆ ಎಂಬ ಅಂಶಗಳ ದೂರಿನ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತದೆ.
ನಿಶಾ ಜೇಮ್ಸ್ ಪರವಾಗಿಯೂ ಕೆಲ ಸಿಬ್ಬಂದಿಗಳು ಸಾಮಾಜಿಕ ಜಾಲತಾಣದಲ್ಲಿ ‘ವಿ ಸಪೋರ್ಟ್ ಯೂ’ ಎಂದು ಕೆಲ ಪೋಲೀಸ್ ಸಿಬ್ಬಂದಿ ಬೆಂಬಲಕ್ಕೆ ನಿಂತಿದ್ದಾರೆ.
ನಿಶಾ ಜೇಮ್ಸ್ ವಿರುದ್ಧ ಆರೋಪಗಳ ವಿಚಾರದ ಕುರಿತು ಇಲಾಖೆಯಲ್ಲಿಯೂ ಚರ್ಚೆ ನಡೆದಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಈ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ವರದಿಯಾಗಿದೆ.
ಸದ್ಯ ನಿಶಾ ಜೇಮ್ಸ್ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಬಿ.ಎಂ. ಲಕ್ಷ್ಮೀ ಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.