ಗಂಗಾವತಿ: ಶಾಲಾ – ಕಾಲೇಜುಗಳ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರಿಗೆ ಮನವಿ ಸಲ್ಲಿಸಿ ಬಜೆಟ್ ನಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಮನವಿ ಸಲ್ಲಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 15-20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಚತಾಗಾರರು, ಕಾವಲುಗಾರರು, ಡಿ ಗ್ರೂಪ್ ಆಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್‌ಗಳು, ಹೊರಗುತ್ತಿಗೆ ಶಿಕ್ಷಕರು, ದಿನಗೂಲಿ ನೌಕರರು ಯಾವುದೇ ಭದ್ರತೆ ಇಲ್ಲದೆ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿರುತ್ತಾರೆ. ವಸತಿ
ಗುತ್ತಿಗೆದಾರರು, ವಾರ್ಡನ್‌ರವರು. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹೊರಗುತ್ತಿಗೆ ಸಿಬ್ಬಂದಿಗಳನ್ನು ಶೋಷಣೆ ಮಾಡುತ್ತಿದ್ದಾರೆ. ಹಾಗಾಗಿ ತಾವು ಹೊರಗುತ್ತಿಗೆ ಸಿಬ್ಬಂದಿಗಳ ಬಗ್ಗೆ ಬಡ್ಡೆಟ್ ಅಧಿವೇಶನದಲ್ಲಿ ಚರ್ಚೆ ಮಾಡಿ ಹೊರಗುತ್ತಿಗೆ ಸಿಬ್ಬಂದಿಗಳಿಗೆ ನ್ಯಾಯ ಕೊಡಿಸಬೇಕಾಗಿ ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಮೂವರು ಸವಾರರು ಸಾವು
ಬೇಡಿಕೆಗಳು
1. ತಿಂಗಳಿಗೆ ಕನಿಷ್ಠ ವೇತನ ಮಾಸಿಕ ರೂ.31 ಸಾವಿರ ಕೊಡಬೇಕು.
2. ಎಲ್ಲಾ ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗಳನ್ನು ಖಾಯಂ ಮಾಡಬೇಕು.
3. ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂ ಮಾಡಲು ರಾಜ್ಯ ಸರ್ಕಾರ ಹೊಸದಾಗಿ ಕಾನೂನು ಜಾರಿ ಮಾಡಬೇಕು
4. ಬೀದರ್ ಮಾದರಿಯಲ್ಲಿ ಸಹಕಾರ ಸಂಘದ ಸೊಸೈಟಿಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಾರಿ ಮಾಡಬೇಕು
5. ನಿವೃತ್ತಿವರೆಗೆ ಸೇವಾ ಭದ್ರತೆ ಕೊಡ ಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ ಇಂಡಿಗಂಟು 10 ಲಕ್ಷ ರೂ. ಕೊಡಬೇಕು.
6. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ. ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿತ ಮಾಡಿರುವ ಆದೇಶ ವಾಪಸ್ ಆಗ ಬೇಕು. ಹಿಂದಿನಂತೆ 50 ಮಕ್ಕಳಿಗೆ 3 ಜನ ಸಿಬ್ಬಂದಿಗಳು ಇರಬೇಕು.
7. 10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಎಲ್ಲರನ್ನೂ ತರಬೇಕು.
8. ಬಿಸಿಎಂ ಇಲಾಖೆಯ ಬಾಕಿ ವೇತನ ನೀಡಬೇಕು
9. 4 ತಿಂಗಳ PF. ESI ಕಟ್ಟದೆ ವೇತನ ಚೀಟಿ ನೀಡದೆ ಇರುವ ಶಾರ್ಪ್ ಎಜೇನ್ಸಿ ಯನ್ನು ಕಪ್ಪು ಪಟ್ಟಿಗೆ ಸೇರಿಸಿ.
10. ಹಾಸ್ಟೆಲ್ ಸಿಬ್ಬಂದಿಗಳನ್ನು ಮಾರ್ಚ್. ಏಪ್ರಿಲ್. ಮೇ ನಲ್ಲಿ ಮಕ್ಕಳ ಸಂಖ್ಯೆ ಇಲ್ಲ ಎಂದು ಕೆಲಸದಿಂದ ಬಿಡಿಸಬಾರದು
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಗ್ಯಾನೇಶ್ ಕಡಗದ ಕಾರ್ಯದರ್ಶಿ ದಾವಲಸಾಬ್ ಖಜಾಂಚಿ ಫಕೀರಪ್ಪ ಸದಸ್ಯರಾದ ಆನಂದ, ಬಾಲನಗೌಡ, ರಮೇಶ್, ವಿಜಯಲಕ್ಷ್ಮಿ, ಜಾನಕಿ, ಅನ್ನಪೂರ್ಣ, ಶಿವು, ಮಂಜುನಾಥ್, ಭಾಷೇಸಾಬ ಇತರರು ಇದ್ದರು.
ಇದನ್ನೂ ನೋಡಿ: ಇಂಗ್ಲೀಷ್ ಕಲಿಯೋಣ | “Wh” ಪ್ರಶ್ನೆಗಳ ರಚನೆ ಹೇಗೆ? | ತೇಜಸ್ವಿನಿ |#whquestions| Spokenenglish |Janashakthi