ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕಹಳ್ಳಿಯಲ್ಲಿ ಬಡ್ಡಿ ಕೊಟ್ಟಿಲ್ಲ ಎಂದು ಸಾಲಗಾರನ ಪುತ್ರಿ ಮೇಲೆ ಅತ್ಯಾಚಾರ ಮಾಡಿರುವಂತಹ ಘಟನೆ ನಡೆದಿದೆ. ಆರೋಪಿಯನ್ನು ಸದ್ಯ ಪೊಲೀಸರು ಬಂಧಿಸಿದ್ದು, ಪೋಕ್ಸೋ ಕೇಸ್ ದಾಖಲಾಗಿದೆ.
17 ವರ್ಷದ ಬಾಲಕಿ ಮೇಲೆ ದುರುಳನಿಂದ ಅತ್ಯಾಚಾರ ನಡೆಸಿದ್ದು, ಬಾಲಕಿ ನೀಡಿದ ದೂರಿನ ಮೇರೆಗೆ ಆರೋಪಿ ರವಿಕುಮಾರ್(39) ಬಂಧಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.
ಇದನ್ನು ಓದಿ : ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ: ಜೈಲು ಶಿಕ್ಷೆ
ಸಂತ್ರಸ್ತ ಬಾಲಕಿಯ ತಂದೆ ಆರೋಪಿ ಬಳಿ 70 ಸಾವಿರ ರೂ. ಹಣ ಪಡೆದಿದ್ದರು. ಈ ಹಿಂದೆ 30 ಸಾವಿರ ರೂ. ಸಾಲ ಕೂಡ ತೀರಿಸಿದ್ದರು. ಇನ್ನುಳಿದ 40 ಸಾವಿರ ರೂ. ಜೊತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ರವಿಕುಮಾರ್ ಪೀಡಿಸುತ್ತಿದ್ದರು.
ಈ ಹಿಂದೆ ಬಲವಂತವಾಗಿ ಬಾಲಕಿಗೆ ರವಿಕುಮಾರ್ ಕಿಸ್ ಕೊಟ್ಟಿದ್ದ. ಕಿಸ್ ಕೊಟ್ಟಿರುವುದನ್ನು ಫೋಟೋ ತೆಗೆದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ಇಂದು ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಸದ್ಯ ರವಿಕುಮಾರ್ನನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಜೈಲಿಗಟ್ಟಿದ್ದಾರೆ.
ಇದನ್ನು ನೋಡಿ : ಬೀದರ್: 19 ವರ್ಷದ ಯುವತಿಯ ಮೇಲೆ ಅತ್ಯಾಚಾರ, ಕೊಲೆ