ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಹಾಗೂ ಧರ್ಮಸ್ಥಳದ ಸುತ್ತಮುತ್ತ ನಡೆಯಿತೆನ್ನಲಾದ ಸರಣಿ ಕೊಲೆಗಳನ್ನು ವರದಿ ಮಾಡುವ ವಿಚಾರದಲ್ಲಿ ನ್ಯಾಯಾಲಯಗಳ ಆದೇಶವನ್ನು ನಾವು ಪಾಲಿಸುತ್ತೇವೆ. ಸದರಿ ಆದೇಶಗಳನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುವ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತಾ, ಈ ಸದ್ಯ ಕೆಳಹಂತದ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ಆದೇಶಗಳನ್ನು ನಾವು ಪಾಲಿಸಲು ಬದ್ಧರಿದ್ದೇವೆ ಎಂದು ಡಿಜಿಟಲ್ ಮೀಡಿಯಾಗಳು ನಿರ್ಣಯಿಸಿವೆ. ಜನಪರ
ಜುಲೈ 25 ರಂದು ಸಭೆ ನಡೆಸಿದ ಜನಪರ ಮೀಡಿಯಾಗಳು ಕೋರ್ಟ್ ಆದೇಶಗಳನ್ನು ಪಾಲಿಸುತ್ತೇವೆ, ಆದರೆ, ಆದೇಶದಲ್ಲೇ ಸೂಚಿಸಿರುವ ಹಾಗೆ ಮತ್ತು ನಮ್ಮ ಪತ್ರಿಕಾಧರ್ಮಕ್ಕೆ ಬದ್ಧರಾಗಿದ್ದುಕೊಂಡು, ಯಾರದ್ದೇ ಮೇಲೆ ಆಧಾರರಹಿತವಾದ, ಮಾನನಷ್ಟಕ್ಕೆ ಕಾರಣವಾಗುವ ಸುದ್ದಿ ಅಥವಾ ವಿಶ್ಲೇಷಣೆಗಳನ್ನು ನಾವು ಪ್ರಕಟಿಸುವುದಿಲ್ಲ; ಅದೇ ಸಂದರ್ಭದಲ್ಲಿ ನಡೆಯುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಯಥಾವತ್ ಸುದ್ದಿಗಳನ್ನು ಪ್ರಕಟಿಸುವ ನಮ್ಮ ಹಕ್ಕನ್ನು ನ್ಯಾಯಾಲಯವು ನಿರ್ಬಂಧಿಸಿಲ್ಲದಿರುವುದನ್ನೂ ನಾವು ಅರಿತಿದ್ದೇವೆ.
ಇದನ್ನೂ ಓದಿ: ದಲಿತ ಮಹಿಳೆಯರು – ಯುವಕನ ಮೇಲೆ ಜಾತಿ ದೌರ್ಜನ್ಯ ಎಸಗಿರುವವರನ್ನು ಬಂಧಿಸಿ: ಡಿಎಚ್ಎಸ್
ಹೀಗಾಗಿ ಸುದ್ದಿಗಳನ್ನು ಪ್ರಕಟಿಸುವ ಮತ್ತು ಈ ಹೊತ್ತು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತುವ ನಮ್ಮ ಹಕ್ಕನ್ನು ಚಲಾಯಿಸುತ್ತೇವೆ ಮತ್ತು ಆ ಮೂಲಕ ನಮ್ಮ ಕರ್ತವ್ಯವನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ ಎಂದು ಜನಪರ ಡಿಜಿಟಲ್ ಮೀಡಿಯಾಗಳಾದ ಈ ದಿನ, ವಾರ್ತಾ ಭಾರತಿ, ಜನಶಕ್ತಿ ಮೀಡಿಯಾ, ನಾನು ಗೌರಿ, ಸನ್ಮಾರ್ಗ, ಕನ್ನಡ ಪ್ಲ್ಯಾನೆಟ್, ಪೀಪಲ್ ಟಿವಿ, ಕುಡ್ಲಂ ರ‌್ಯಾಂಪೇಜ್, ಪ್ರಸ್ತುತ, ಪ್ರತಿಧ್ವನಿ, ನ್ಯಾಶನಲ್, ಕನ್ನಡ ಒನ್, ಕಲಾಮಾಧ್ಯಮ ಸೇರಿದಂತೆ ಹಲವು ಡಿಜಿಟಲ್ ಮೀಡಿಯಾ ಹಾಗೂ ಯೂಟ್ಯೂಬರ್ ಗಳು ಈ ನಿರ್ಣಯವನ್ನು ತಿಳಿಸಿವೆ.

ಇದನ್ನೂ ನೋಡಿ: ಬಿಹಾರ ಚುನಾವಣೇ | “ವಿಶೇಷ ತೀವ್ರ ಪರಿಷ್ಕರಣೆ”ಎನ್‌ಡಿಎ ಕೂಟದ ಹೊಸ ನಾಟಕ Janashakthi Media

Ok