ಬಾಗಲಕೋಟೆ: ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸೆ- 2 ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣಾ ನದಿಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು ಅವರು, ಆಲಮಟ್ಟಿಯ ಸಂಗ್ರಹಣೆ ಮಟ್ಟ 519.6 ಮೀಟರ್ ಅಡಿ ಇದೆ. ಅದರ ಒಟ್ಟು ಸಂಗ್ರಹಣೆ 123.08 ಟಿ.ಎಂಸಿ. ಒಂದು ಟಿಎಂಸಿ ನೀರು ಎಂದರೆ 11 ಸಾವಿರ ಕ್ಯೂಸೆಕ್ಸ್ ನೀರು. ಇಡೀ ಕರ್ನಾಟಕದ ಜಲಾಶಯಗಳಲ್ಲಿ ಕೃಷ್ಣಾ ಮೇಲ್ದಂಡೆ ಪೂರ್ಣ ಭರ್ತಿಯಾಗಿದೆ. ನಾರಾಯಣಪುರ ಜಲಾಶಯ ತುಂಬಿದೆ. ಭರ್ತಿಯಾಗಿರುವುದರಿಂದ ನಾಲೆಗಳಿಗೆ, ಕುಡಿಯುವ ನೀರು, ವಿದ್ಯುಚ್ಛಕ್ತಿ ಉತ್ಪಾದನೆಗೆ ನೀರು ಹರಿಸಲಾಗುತ್ತಿದೆ ಎಂದರು.
ಇದನ್ನೂ ಓದಿ:ಕೇಂದ್ರದ ಮಾನದಂಡ ಆಧರಿಸಿ ಬರ ಪೀಡಿತ ಪ್ರದೇಶ ಘೋಷಣೆ:ಕಂದಾಯ ಸಚಿವ ಕೃಷ್ಣ ಬೈರೇಗೌಡ
ಕುಡಿಯುವ ನೀರು ಬಿಟ್ಟಿರುವುದರಿಂದ ಒಂದು ಟಿಎಂಸಿ ನೀರು ಕಡಿಮೆ ಇದೆ. ನಾರಾಯಣಪುರದಲ್ಲಿಯೂ ಕೂಡ 492 ಮೀ. ನೀರು ಇದೆ. 105.46 ಟಿಎಂಸಿ ನೀರು ಲೈವ್ ಸ್ಟೋರೇಜೆ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ 11 ಟಿಎಂಸಿ ನೀರಿನ ಸಂಗ್ರಹ ಕಡಿಮೆ ಇದೆ. ಕಳೆದ ವರ್ಷ ಒಳಹರಿವು ಹೆಚ್ಚಿತ್ತು.25450 ಕ್ಯೂಸೆಕ್ಸ್ ನೀರಿತ್ತು , ಆದರೆ ಈಗ 3730 ಕ್ಯೂಸೆಕ್ಸ್ ನೀರಿನ ಸಂಗ್ರಹ ಇದೆ ಎಂದು ಹೇಳಿದರು.
ಬರಗಾಲ ಘೋಷಣೆ: ಸೆ.4 ರಂದು ತೀರ್ಮಾನ:
ಒಟ್ಟಾರೆಯಾಗಿ ಈ ವರ್ಷ ಕೃಷ್ಣಾ ಮೇಲ್ದಂಡೆ ಪ್ರದೇಶದ ಅಚ್ಚುಕಟ್ಟಿನಲ್ಲಿ ಮಳೆ ಕಡಿಮೆಯಾಗಿದೆ. ಈ ವರ್ಷ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾಗಿದೆ. ಶೇ. 56% ಕೊರತೆಯಾಗಿದೆ. ಆಗಸ್ಟ್ ನಲ್ಲಿಯೂ ಕೊರತೆ ಕಂಡು ಬಂದಿದ್ದು, ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಈಗಾಗಲೇ ಮೂರು ಸಭೆಗಳನ್ನು ನಡೆಸಿದೆ. ಪುನ: ಸೆ.04 ರಂದು ಮತ್ತೊಂದು ಸಭೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿ ಬರಗಾಲ ಇದೆ ಎಂದು ಜಂಟಿ ಸಮೀಕ್ಷೆ ನಡೆಸಿದ್ದಾರೆ. ಇದಲ್ಲದೆ 73 ತಾಲ್ಲೂಕುಗಳಲ್ಲಿ ಬರಗಾಲ ಉಂಟಾಗಿದೆ ಎಂದು ಹೇಳಿದ್ದಾರೆ. ಅದಕ್ಕೂ ಜಂಟಿ ಸಮೀಕ್ಷೆ ನಡೆಸಿ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗಿದೆ. ಸೆ.4 ರಂದು ಒಂದು ತೀರ್ಮಾನಕ್ಕೆ ಬರಲಾಗುವುದು ಎಂದರು.