ಹಾವೇರಿ: 2025-26 ನೇ ಸಾಲಿನ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆ ವಿಳಂಬ ನೀತಿಯನ್ನು ಖಂಡಿಸಿ ಶೀಘ್ರವಾಗಿ ಆಯ್ಕೆ ಪಟ್ಟಿ ಬಿಡುಗಡೆಗೆ ಆಗ್ರಹಿಸಿ ಪತ್ರಿಕಾ ಹೇಳಿಕೆ ನೀಡಿದ ಎಸ್ಎಫ್ಐ ಜಿಲ್ಲಾಧ್ಯಕ್ಷರು ಬಸವರಾಜ.ಎಸ್ ಅವರು, ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭವಾಗಿ ಒಂದು ತಿಂಗಳು ಕಳೆದರು ಹಾಸ್ಟೆಲ್ ಬಯಸಿ ವಿದ್ಯಾರ್ಥಿಗಳು ಹಾಸ್ಟೆಲ್ ಅರ್ಜಿ ಹಾಕಿದ ವಿದ್ಯಾರ್ಥಿಗಳು ಗ್ರಾಮಗಳಿಂದ ಕಾಲೇಜುಗಳಿಗೆ ದಿನನಿತ್ಯವೂ ಹಣ ಕೊಟ್ಟು ಬರುತ್ತಿದ್ದಾರೆ ಎಂದರು. ಪ್ರವೇಶ
ಒಂದಡೆ ಅನೇಕ ಗ್ರಾಮಗಳಿಗೆ ಬಸ್ ಸೌಲಭ್ಯ ಇಲ್ಲ ಮತ್ತು ಅನೇಕ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ ಹಾಕಿ ಆಯ್ಕೆ ಪಟ್ಟಿ ಪ್ರಕಟಿಸುತ್ತಾರೆ ಎಂದು ಬಕಪಕ್ಷಿಗಳ ಹಾಗೆ ಕಾಯುತ್ತಿದ್ದಾರೆ ಮತ್ತು ಅನೇಕ ವಿದ್ಯಾರ್ಥಿಗಳು ದೂರದ ಊರಿನಿಂದ ನೂರಾರು ರೂಪಾಯಿ ಖರ್ಚು ಮಾಡಿಕೊಂಡು ಬರುತ್ತಿದ್ದಾರೆ ಎಂದರು.
ಇದನ್ನೂ ಓದಿ: ಗುರುಗ್ರಾಮ್| ಧಾರಾಕಾರ ಮಳೆಗೆ ರಸ್ತೆ ಮಧ್ಯೆ 40 ಅಡಿ ಆಳದ ಕಂದಕ ನಿರ್ಮಾಣ
“ಜಿಲ್ಲೆಯ ಎಲ್ಲಾ ತಾಲ್ಲೂಕಿನ ಆಯ್ಕೆ ಸಮಿತಿಯ ಅಧ್ಯಕ್ಷರು ಶಾಸಕರು ಆಗಿರುವುದರಿಂದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆಗೆ ವಿಳಂಬ ಮಾಡಬಾರದು, ಮುತುವರ್ಜಿಯಿಂದ ಕೂಡಲೇ ಆಯ್ಕೆ ಪಟ್ಟಿ ಬಿಡುಗಡೆ ಮಾಡಿಸಬೇಕು ಹಾಗೂ ಎಲ್ಲಾ ಹಾಸ್ಟೆಲ್ ಗಳನ್ನು ಕೂಡಲೇ ಯೋಗ್ಯವಾದ ಅಗತ್ಯ ಸೌಲಭ್ಯಗಳನ್ನು ಒಳಗೊಂಡ ಕಟ್ಟಡದಲ್ಲಿ ಪ್ರಾರಂಭಿಸಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಮತ್ತು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಹಾಸ್ಟೆಲ್ ಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಲ್ಲಾ ತಾಲ್ಲೂಕ ವಿಸ್ತರಣಾಧಿಕಾರಿಗಳು ಎಚ್ಚೆತ್ತುಕೊಂಡು ಈ ಕೂಡಲೇ ಶಾಸಕರ ಗಮನಕ್ಕೆ ತಂದು ಹಾಸ್ಟೆಲ್ ಆಯ್ಕೆ ಪಟ್ಟಿ ಬಿಡುಗಡೆ ಮಾಡಬೇಕು. ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು. ಮೆನ್ ಚಾರ್ಟ್ ಪ್ರಕಾರ ಉತ್ತಮ ಗುಣಮಟ್ಟದ ಆಹಾರವನ್ನು ಸಮಯಕ್ಕೆ ಸರಿಯಾಗಿ ಒದಗಿಸಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಹಾಗೂ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ 3.500 ರೂ ಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಶೀಘ್ರವಾಗಿ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನಾ, ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ನೋಡಿ: ಸಾರ್ವತ್ರಿಕ ಮುಷ್ಕರ | ರೈತ ಕಾರ್ಮಿಕ ಸಂಘಟಿತ ಹೋರಾಟವೇ ಎಲ್ಲದಕ್ಕೂ ಪರಿಹಾರ | ಜುಲೈ 09Janashakthi Media
