ದಿಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ : ಬಿಜೆಪಿಗೆ ಆರಂಭಿಕ ಮುನ್ನಡೆ

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಬಿಜೆಪಿ ಅಭ್ಯರ್ಥಿಗಳು 42 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ಎಎಪಿ 25 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಮುನ್ನಡೆಯನ್ನು ಸಾಧಿಸಿದೆ.

70 ಸದಸ್ಯ ಬಲದ ದಿಲ್ಲಿ ವಿಧಾನಸಭೆಗೆ ಫೆ. 5ರಂದು ಮತದಾನ ನಡೆದಿತ್ತು. ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಈ ಕುರಿತು ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

Donate Janashakthi Media

Leave a Reply

Your email address will not be published. Required fields are marked *