ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯ ಮತದಾನ ಬುಧವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಿದ್ದು, ಸಂಜೆ 5 ಗಂಟೆಯವರೆಗೆ ಶೇ. 57.70 ರಷ್ಟು ಮತದಾನ ದಾಖಲಾಗಿದೆ. ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಬೆಳಗ್ಗೆ 7.00 ಗಂಟೆಗೆ ಮತದಾನ ಪ್ರಾರಂಭವಾಯಿತು.
ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದ್ದು, ಬೆಳಗ್ಗೆ 7.00 ಗಂಟೆಗೆ ಮತದಾನ ಪ್ರಾರಂಭವಾಯಿತು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಿದೆ.
ಬೆಳಗ್ಗೆಯಿಂದಲೇ ನೀರಸವಾಗಿ ಸಾಗುತ್ತಿದ್ದ ಮತದಾನ ಮಧ್ಯಾಹ್ನದ ವೇಳೆಗೆ ತುಸು ಚುರುಕು ಪಡೆದುಕೊಂಡಿದೆ. ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿ, ರಾಷ್ಟ್ರ ರಾಜಧಾನಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವುದಕ್ಕೆ ಆಮ್ ಅದ್ಮಿ ಪಕ್ಷ ಸಜ್ಜಾಗಿದೆ
ಇನ್ನು ಬಿಜೆಪಿ ಈ ಬಾರಿಯಾದರೂ ಅಧಿಕಾರ ಪಡೆಯುವ ಉತ್ಸಾಹದಲ್ಲಿದೆ. ಇದರ ಮಧ್ಯೆ ಆಮ್ ಆದ್ಮಿಯಿಂದ ದೂರ ಸರಿದು, ಪ್ರತ್ಯೇಕವಾಗಿ ಸ್ಪರ್ಧಿಸಿರುವ ಕಾಂಗ್ರೆಸ್ ಕೂಡ ಸರ್ಕಾರ ರಚಿಸೋ ಕನಸು ಕಾಣುತ್ತಿದೆ.
70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಮತದಾನಕ್ಕಾಗಿ ಒಟ್ಟು 13766 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.