ಗಾಂಧಿನಗರ: ಗುಜರಾತ್ ನ ರಾಜ್ ಕೋಟ್ ನ ಗರ್ಬಾದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಪ್ಲಾಸ್ಟಿಕ್ ಬಾಟಲಿ ಎಸೆದಿದ್ದಾರೆ.
ಶನಿವಾರ ರಾತ್ರಿ ಖೋಡಲ್ಧಾಮ್ ದೇವಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿಯಾದ ಕೇಜ್ರಿವಾಲ್ ಅವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ನಿರತರಾಗಿದ್ದರು. ಆ ಸಂದರ್ಭದಲ್ಲಿ ಕೇಜ್ರಿವಾಲ್ ಮೇಲೆ ಯಾರೋ ಬಾಟಲಿಯನ್ನು ಎಸೆದಿದ್ದಾರೆ. ಆದರೆ ಅವರಿಗೆ ಆ ಬಾಟಲಿ ತಾಗಲಿಲ್ಲ.
ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ನ ಸಿಎಂ ಭಗವಂತ್ ಮಾನ್ ಅವರೊಂದಿಗೆ ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ.