ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಗೋಡೆ ಕುಸಿದು 4 ಮಂದಿಗೆ ಗಾಯ

ನವದೆಹಲಿ: ಗುರುವಾರ ಈಶಾನ್ಯ ದೆಹಲಿಯ ಗೋಕುಲಪುರಿ ಮೆಟ್ರೋ ನಿಲ್ದಾಣದ ಗಡಿ ಗೋಡೆಯ (ಪೂರ್ವ ಭಾಗ) ರಸ್ತೆಯ ಮೇಲೆ ಕುಸಿದುಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. “ಬೆಳಿಗ್ಗೆ 11 ಗಂಟೆಗೆ, ಗೋಕುಲಪುರಿ ಮೆಟ್ರೋ ನಿಲ್ದಾಣದ ಗಡಿ ಗೋಡೆಯ (ಪೂರ್ವ ಭಾಗ) ಒಂದು ಭಾಗವು ಕೆಳಗಿನ ರಸ್ತೆಯ ಮೇಲೆ ಬಿದ್ದಿದೆ ಮತ್ತು ಕನಿಷ್ಠ 3 ರಿಂದ 4 ಜನರು ಗಾಯಗೊಂಡಿದ್ದರು” ಎಂದು ಈಶಾನ್ಯ ದೆಹಲಿಯ ಪೊಲೀಸ್ ಉಪ ಕಮಿಷನರ್ (ಡಿಸಿಪಿ) ಜಾಯ್ ಟಿರ್ಕಿ ಅವರು ಗುರುವಾರ ಹೇಳಿದ್ದಾರೆ.

“ಒಬ್ಬ ವ್ಯಕ್ತಿ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಆದರೆ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾರ್ವಜನಿಕರ ನೆರವಿನೊಂದಿಗೆ ಪೊಲೀಸ್ ಸಿಬ್ಬಂದಿ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಘಟನೆ ನಡೆದಾಗ ಅವರು ತಮ್ಮ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಕೂಡಲೇ ಅವರನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಡಿಸಿಪಿ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವ ದುರ್ಬಲಗೊಳ್ಳುತ್ತಿದೆ: ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಕೇರಳ ಸಿಎಂ

ಗಾಯಾಳುಗಳನ್ನು ಗುರುತಿಸಲು ಪ್ರಯತ್ನ ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ. ಜೆಸಿಬಿ ಹಾಗೂ ಕ್ರೇನ್‌ಗಳ ಸಹಾಯದಿಂದ ಅವಶೇಷಗಳನ್ನು ತೆಗೆಯಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದು, ದುರ್ಘಟನೆ ಸಂಬಂಧ ಕಾನೂನು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬೆಳಿಗ್ಗೆ 11:10 ಕ್ಕೆ ದುರ್ಘಟನೆ ನಡೆದಿರುವ ಬಗ್ಗೆ ಕರೆ ಬಂದಿತ್ತು. ಆ ಕೂಡಲೆ ಕರೆಯನ್ನು  ಸ್ವೀಕರಿಸಿ ನಾಲ್ಕು ಅಗ್ನಿಶಾಮಕ ಟೆಂಡರ್‌ಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

“ಒಬ್ಬ ವ್ಯಕ್ತಿಯನ್ನು ಡಿಎಫ್‌ಎಸ್ ಸಿಬ್ಬಂದಿ ಅವಶೇಷಗಳಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಡಿಎಫ್‌ಎಸ್ ಘಟಕದ ಆಗಮನದ ಮೊದಲು ಸಾರ್ವಜನಿಕರಿಂದ ಕೆಲವು ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ ”ಎಂದು ದೆಹಲಿ ಅಗ್ನಿಶಾಮಕ ಸೇವೆಯ (ಡಿಎಫ್‌ಎಸ್) ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ ಎಂದು ವರದಿಯಾಗಿದೆ.

ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (ಡಿಎಂಆರ್‌ಸಿ) ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದು, ಸಣ್ಣಪುಟ್ಟ ಗಾಯಗಳಾದವರಿಗೆ 50,000 ರೂಪಾಯಿ ಹಾಗೂ ಗಂಭೀರ ಗಾಯಗೊಂಡವರಿಗೆ 2.5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಘಟನೆಯ ನಂತರದ ತನಿಖೆಯ ಭಾಗವಾಗಿ, ದೆಹಲಿ ಮೆಟ್ರೋ ರೈಲು ನಿಗಮದ (ಡಿಎಂಆರ್‌ಸಿ) ಸಿವಿಲ್ ಇಲಾಖೆಯ ಮ್ಯಾನೇಜರ್ ಮತ್ತು ಜೂನಿಯರ್ ಇಂಜಿನಿಯರ್ ಅನ್ನು ಅಮಾನತುಗೊಳಿಸಲಾಗಿದೆ. ತನಿಖೆಗೆ ಆದೇಶಿಸಲಾಗಿದೆ ಮತ್ತು ಅದರ ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ.

ವಿಡಿಯೊ ನೋಡಿ: ಎಚ್ಚರ ಮತ್ತು ವಿವೇಕದ ಕಣ್ಣುಗಳನ್ನು ತೆರೆಯಿಸುವ ಹೊಣೆ ಪತ್ರಕರ್ತರದ್ದು – ಟಿ. ಗುರುರಾಜ Janashakthi Media

Donate Janashakthi Media

Leave a Reply

Your email address will not be published. Required fields are marked *