- ಅಕ್ರಮ ಹಣ ವರ್ಗಾವಣೆಯಲ್ಲಿ ಎಎಪಿ ಸರ್ಕಾರದ ಆರೋಗ್ಯ ಸಚಿವ ಭಾಗಿ
- ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ರಾವುಜ್ ಅವನ್ಯೂ ಕೋರ್ಟ್ ಆದೇಶ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯ(ಇಡಿ) ಬಂಧನದ ಅವಧಿ ಇಂದು ಕೊನೆಗೊಳ್ಳಲಿದ್ದು, ನ್ಯಾಯಾಲಯವು ಮತ್ತೆ 14 ದಿನಗಳ ಬಂಧನಕ್ಕೆ ಒಪ್ಪಿಸಿದೆ. 14 ದಿನಗಳ ನ್ಯಾಯಾಂಗ ಬಂಧನಕ್ಕೆ ರಾವುಜ್ ಅವೆನ್ಯೂ ಕೋರ್ಟ್ ಆದೇಶಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದವಾರ ಜೈನ್ ಅವರ ನಿವಾಸ ಮತ್ತು ಸಂಬಂಧಿತ ಇತರ ಸ್ಥಳಗಳಲ್ಲಿ ಇ ಡಿ ಶೋಧ ಕಾರ್ಯಾಚರಣೆ ನಡೆಸಿ ರೂ 2.85 ಕೋಟಿ ನಗದು ಹಣ ಮತ್ತು 133 ಚಿನ್ನದ ನಾಣ್ಯಗಳನ್ನ ವಶಕ್ಕೆ ಪಡೆದುಕೊಂಡಿತ್ತು. ಈ ವಿಚಾರವಾಗಿ ಇಂದಿನವರೆಗೂ ಅವರನ್ನು ನ್ಯಾಯಾಲಯವು ಜಾರಿ ನಿರ್ದೇಶನಾಲಯ ವಶಕ್ಕೆ ಒಪ್ಪಿಸಿತ್ತು.
ಸತ್ಯೇಂದ್ರ ಜೈನ್ ದೆಹಲಿಯಲ್ಲಿ ಹಲವಾರು ಶೆಲ್ ಕಂಪನಿಗಳನ್ನು ಖರೀದಿಸಿದ್ದಾರೆ ಮತ್ತು ಅವುಗಳ ಮೂಲಕ 16.39 ಕೋಟಿ ರೂ. ಮೌಲ್ಯದ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ.
ಕೋಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷ ಏಪ್ರಿಲ್‌ನಲ್ಲಿ 4.81 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡ ನಂತರ ಇಡಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿತ್ತು. ನಿಖಾ ಸಂಸ್ಥೆಯು ಎಎಪಿ ನಾಯಕನ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದ್ದು, ಜೈನ್ ಅವರು ಷೇರುದಾರರಾಗಿದ್ದ ನಾಲ್ಕು ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಿಲ್ಲ ಎಂದು ಜಾರಿ ನಿರ್ದೇಶನಾಲಯ ಆರೋಪವಾಗಿದೆ.