ನವದೆಹಲಿ | ವಾರಕ್ಕೆ 5 ದಿನಗಳ ಕೆಲಸಕ್ಕೆ ಒತ್ತಾಯ: ಬ್ಯಾಂಕ್‌ ನೌಕರರ ದೇಶವ್ಯಾಪಿ ಮುಷ್ಕರ ಇಂದು

ನವದೆಹಲಿ: ಬ್ಯಾಂಕ್‌ ನೌಕರರು ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆ ಸಕಾರಾತ್ಮಕ ಫಲಿತಾಂಶವನ್ನು ನೀಡದ ಕಾರಣ, ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಮುಷ್ಕರಕ್ಕೆ ಕರೆ ನೀಡಿದೆ.

ಸರ್ಕಾರಿ ಸ್ವಾಮ್ಯದ ಎಲ್ಲ ಬ್ಯಾಂಕ್‌ಗಳು ಹಾಗೂ ಈ ಮುಷ್ಕರಿಂದ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ), ಪಂಜಾಬ್ ನ್ಯಾಷನಲ್‌ ಬ್ಯಾಂಕ್, ಬ್ಯಾಂಕ್‌ ಆಫ್ ಬರೋಡಾ ಸೇರಿದಂತೆ  ಶಾಖೆಗಳಲ್ಲಿ ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್‌ನಂತಹ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.

‌ಆದರೆ, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್‌, ಎಕ್ಸಿಸ್ ಬ್ಯಾಂಕ್‌ ಸೇರಿದಂತೆ ಖಾಸಗಿ ವಲಯದ ಬ್ಯಾಂಕ್‌ಗಳ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿಲ್ಲ. ಹೀಗಾಗಿ ಖಾಸಗಿ ಬ್ಯಾಂಕ್‌ಗಳ ವಹಿವಾಟಿನ ಮೇಲೆ ಮುಷ್ಕರವು ಪರಿಣಾಮ ಬೀರದು ಎನ್ನಲಾಗಿದೆ.

ಎಟಿಎಂಗಳಲ್ಲಿ ನಗದು ಲಭ್ಯತೆ ಕೆಲವೆಡೆ ಇಲ್ಲವಾಗಬಹುದು. ಯುಪಿಐ ಮತ್ತು ಇಂಟರ್‌ನೆಟ್‌ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್‌ ಮಾಧ್ಯಮದ ಮೂಲಕ ಲಭ್ಯವಾಗುವ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಇದನ್ನೂ ಓದಿ : ಬೆಂಗಳೂರು | ಫಕೀರ್‌ ಕಾಲೋನಿ, ಕೋಗಿಲು ಲೇಔಟ್‌ ನಲ್ಲಿ ಬಡವರ ಗಣರಾಜ್ಯೋತ್ಸವ ಆಚರಣೆ

ಎಸ್‌ಬಿಐ ಸೇರಿದಂತೆ ಸರ್ಕಾರಿ ಸ್ವಾಮ್ಯದ ಹಲವು ಬ್ಯಾಂಕ್‌ಗಳು ಮುಷ್ಕರದ ಕುರಿತು ಷೇರು ವಿನಿಮಯ ಕೇಂದ್ರಗಳಿಗೆ ಮಾಹಿತಿ ನೀಡಿವೆ. ಸರ್ಕಾರವು ನಮ್ಮ ಈ ಬೇಡಿಕೆಗೆ ಸ್ಪಂದಿಸುತ್ತಿಲ್ಲ’ ‘ಎಲ್ಲ ಶನಿವಾರಗಳನ್ನು ರಜಾದಿನಗಳನ್ನಾಗಿ ಘೋಷಿಸಬೇಕು ಎಂಬ ನಿರ್ಧಾರಕ್ಕೆ ಇಂಡಿಯನ್‌ ಬ್ಯಾಂಕ್ ಅಸೋಸಿಯೇಷನ್ (ಐಬಿಎ) ಮತ್ತು ಯುಎಫ್‌ಬಿಯು ನಡುವೆ 2024ರ ಮಾರ್ಚ್‌ನಲ್ಲಿ ನಡೆದ ವೇತನ ಪರಿಷ್ಕರಣೆ ಸಂದರ್ಭದಲ್ಲಿ ಒಪ್ಪಿಗೆ ನೀಡಲಾಗಿತ್ತು. ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ (ಎಐಬಿಒಸಿ) ಪ್ರಧಾನ ಕಾರ್ಯದರ್ಶಿ ರೂಪಮ್ ರಾಯ್ ಹೇಳಿದ್ದಾರೆ.

ಪ್ರತಿ ಶನಿವಾರ ರಜೆ ನೀಡುವುದರಿಂದ ಕೆಲಸದ ದಿನಗಳು ನಷ್ಟವಾಗುವುದಿಲ್ಲ ‘ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ 40 ನಿಮಿಷ ಹೆಚ್ಚುವರಿ ಕೆಲಸ ಮಾಡಲು ಒಪ್ಪಿಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಹೀಗಾಗಿ ಮುಷ್ಕರಕ್ಕೆ ಮುಂದಾಗುತ್ತಿದ್ದೇವೆ’ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘದ (ಎಐಬಿಇಎ) ಪ್ರಧಾನ ಕಾರ್ಯದರ್ಶಿ ಸಿ.ಎಚ್‌. ವೆಂಕಟಾಚಲಂ ಹೇಳಿದ್ದಾರೆ. ಮುಖ್ಯ ಕಾರ್ಮಿಕ ಆಯುಕ್ತರ ಜೊತೆ ನಡೆದ ಸಭೆಯಲ್ಲಿ ನಮ್ಮ ಬೇಡಿಕೆ ವಿಚಾರವಾಗಿ ಯಾವುದೇ ಭರವಸೆ ಸಿಗಲಿಲ್ಲ.  ಈಗಿರುವ ನಿಯಮಗಳ ಪ್ರಕಾರ ಪ್ರತಿ ತಿಂಗಳ ಎರಡನೆಯ ಹಾಗೂ ನಾಲ್ಕನೆಯ ಶನಿವಾರ ಬ್ಯಾಂಕ್‌ಗಳಿಗೆ ರಜೆ ಇದೆ.

ಭಾರತೀಯ ಸ್ಟೇಟ್‌ ಬ್ಯಾಂಕ್‌, ಪಂಜಾಬ್ ನ್ಯಾಷನಲ್‌ ಬ್ಯಾಂಕ್, ಬ್ಯಾಂಕ್‌ ಆಫ್ ಬರೋಡಾ, ಕೆನರಾ ಬ್ಯಾಂಕ್‌ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲ ಬ್ಯಾಂಕ್‌ಗಳು ಈ ಬ್ಯಾಂಕ್‌ಗಳಲ್ಲಿ ಸೇವೆಗೆ ಧಕ್ಕೆ ಇಲ್ಲ ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್‌, ಎಕ್ಸಿಸ್ ಬ್ಯಾಂಕ್‌, ಕರ್ಣಾಟಕ ಬ್ಯಾಂಕ್‌ ಸೇರಿದಂತೆ ಖಾಸಗಿ ವಲಯದ ಬ್ಯಾಂಕ್‌ಗಳು ಈ ಸೇವೆಗಳಿಗೆ ತೊಂದರೆ ಆಗಬಹುದು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ನ ಶಾಖೆಗಳಿಗೆ ಭೇಟಿ ನೀಡಿ ಪಡೆಯುವ ಸೇವೆಗಳಿಗೆ ಅಡ್ಡಿ ಆಗಬಹುದು. ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್‌ನಂತ ಸೇವೆಗಳಿಗೆ ಸಮಸ್ಯೆ ಉಂಟಾಗಬಹುದು. ಎಟಿಎಂನಲ್ಲಿ ನಗದು ಲಭ್ಯತೆಗೆ ಕೆಲವೆಡೆ ಸಮಸ್ಯೆ ಆಗಬಹುದು.

ಈ ಸೇವೆಗಳು ಎಂದಿನಂತೆ… ಯುಪಿಐ ಮತ್ತು ಇಂಟರ್‌ನೆಟ್‌ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್‌ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ

ಇದನ್ನೂ ನೋಡಿ : ಲಾಲ್‌ಬಾಗ್‌ ಫ್ಲವರ್‌ ಶೋ| ಬಣ್ಣಬಣ್ಣದ ಹೂಗಳ ಚಿತ್ತಾರದಲ್ಲಿ ‘ತೇಜಸ್ವಿ ವಿಸ್ಮಯ’ Janashakthi Media

Donate Janashakthi Media

Leave a Reply

Your email address will not be published. Required fields are marked *