ಹೈಕೋರ್ಟ್ ಆದೇಶದಂತೆ ಶೈಕ್ಷಣಿಕ ಧನಸಹಾಯ ಪಾವತಿಸಲು ಆಗ್ರಹ
ಬೆಂಗಳೂರು: ಹೈಕೋರ್ಟ್ ಆದೇಶದಂತೆ ಶೈಕ್ಷಣಿಕ ಧನಸಹಾಯ ಪಾವತಿಸಬೇಕು ಹಾಗೂ ಖರೀದಿಗಳ ಮೂಲಕ ನಡೆಸಲಾಗುವ ವ್ಯಾಪಕ ಭ್ರಷ್ಟಾಚಾರದಿಂದ ಕಲ್ಯಾಣ ಮಂಡಳಿಯನ್ನು ಮುಕ್ತಗೊಳಿಸಬೇಕು. ಆ ಮೂಲಕ ಮಂಡಳಿ ನಿಧಿ ಉಳಿಸಿ, ಬಡ ಕಾರ್ಮಿಕರ ಬದುಕು ರಕ್ಷಿಸಲು ಆಗ್ರಹಿಸಿ 2024 ಆಗಸ್ಟ್ 5 ರಂದು ರಾಜ್ಯದ ಸಾವಿರಾರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಬೆಂಗಳೂರಿನಲ್ಲಿ ಬೃಹತ್ ಮಟ್ಟದಲ್ಲಿ ಮುಖ್ಯಮಂತ್ರಿ ಮನೆ ಚಲೋ ನಡೆಸಲಿದ್ದಾರೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ. ಮಹಾಂತೇಶ್ ತಿಳಿಸಿದರುಹೈಕೋರ್ಟ್
ನಗರದ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ಸಂಯೋಜನೆಗೊಂಡಿರುವ ಎಲ್ಲ ಕಟ್ಟಡ ಕಾರ್ಮಿಕ ಸಂಘಗಳ ಒಕ್ಕೂಟವಾದ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ರಾಜ್ಯದ್ಯಾಂತ ಆಗಮಿಸುವ ಹತ್ತು ಸಾವಿರಕ್ಕೂ ಅಧಿಕ ಕಟ್ಟಡ ನಿರ್ಮಾಣ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದರು.ಹೈಕೋರ್ಟ್
ರಾಜ್ಯದಲ್ಲಿ 2007 ರಿಂದ ಅಸ್ತಿತ್ವದಲ್ಲಿರುವ ಕರ್ನಾಟಕ ಕಟ್ಟಡ ಮತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಮಿಕರಿಗಾಗಿ 19 ಸೌಲಭ್ಯಗಳನ್ನು ಘೋಷಿಸಿದೆ. ಇದರಲ್ಲಿ 11 ಮಾತ್ರವೇ ಜಾರಿಯಲ್ಲಿವೆ! ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣ, ಮದುವೆ, ಆರೋಗ್ಯ, ಅಪಘಾತ ಸಹಜ ಮರಣ, ಹೆರಿಗೆ ಮೊದಲಾದ ಸೌಲಭ್ಯಗಳು ಜಾರಿಯಲ್ಲಿವೆ. ಆದರೆ ಇತ್ತೀಚಿಗೆ ಕಲ್ಯಾಣ ಮಂಡಳಿಯು ಬೋಗಸ್ ಕಾರ್ಡ ನಿಯಂತ್ರಣಕ್ಕಾಗಿ ಹಲವು ಬಿಗಿ ಕ್ರಮಗಳನ್ನು ಅನುಸರಿಸುತ್ತಿದೆ ಇದು ಸ್ವಾಗತಾರ್ಹ ಆದರೆ ಬೋಗಸ್ ನಿಮತಂತ್ರಣದ ನೆಪದಲ್ಲಿ ಸಾವಿರಾರು ನೈಜ ಕಟ್ಟಡ ಕಾರ್ಮಿಕರು ಬಲಿಪಶುವಾಗುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಮುಡಾ ಸೈಟ್ ಅಕ್ರಮ ಹಂಚಿಕೆ; ಶೀಘ್ರದಲ್ಲೇ ಪಟ್ಟಿ ಬಿಡುಗಡೆ – ಡಿಸಿಎಂ ಡಿ.ಕೆ ಶಿವಕುಮಾರ್
ನೊಂದಣಿ,ನವೀಕರಣ ಹಾಗೂ ವಿವಿಧ ಸೌಲಭ್ಯಗಳಿಗೆ ಅರ್ಜಿ ಹಾಕಲು ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದೆ. ಮಂಡಳಿ ತಂತ್ರಾಂಶದಲ್ಲಿ ಪದೇ ಪದೇ ಉಂಟಾಗುತ್ತಿರುವುದರಿಂದ ಶೈಕ್ಷಣಿಕ ಧನ ಸಹಾಯ, ಮದುವೆ, ವೈದ್ಯಕೀಯ, ಹೆರಿಗೆ, ಪಿಂಚಣಿ ಮೊದಲಾದ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಸಲ್ಲಿಸಲಾದ ಸಾವಿರಾರು ಫಲಾನುಭವಿಗಳಿಗೆ ಧನ ಸಹಾಯ ಪಾವತಿ ಸರಿಯಾಗಿ ಆಗುತ್ತಿಲ್ಲ. ಶೈಕ್ಷಣಿಕ ಧನ ಸಹಾಯವನ್ನು ಶೇ 60 ರಿಂದ 80 ರವರೆಗೆ ಕಡಿತ ಮಾಡಿರುವುದರಿಂದ ಸಾವಿರಾರು ಬಡ ಕಟ್ಟಡ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಅಪಾಯ ಎದುರಾಗಿದೆ. ಕಲ್ಯಾಣ ಮಂಡಳಿಯು ಶೈಕ್ಷಣಿಕ ಧನ ಸಹಾಯ ಕಡಿತ ಮಾಡಿದ್ದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಷನ್ ಹೈಕೋರ್ಟ ನಲ್ಲಿ ಅರ್ಜಿ ಹಾಕಿ ಇಬ್ಬರು ಬಡ ಕಾರ್ಮಿಕರ ಮಕ್ಕಳಿಗೆ ದಂಡ ಸಹಿತ ಧನ ಸಹಾಯ ಕೊಡಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು. ಹೈಕೋರ್ಟ್
ಹಿಂದಿನ ಬಿಜೆಪಿ ಸರ್ಕಾರದ ಬೊಮ್ಮಾಯಿ ಸರ್ಕಾರದ ವೇಳೆ ಕಾರ್ಮಿಕ ಸಚಿವರಾಗಿದ್ದ ಶಿವರಾಂ ಹೆಬ್ಬಾರ್ ತಮ್ಮ ಅವಧಿಯಲ್ಲಿ ಟಿವಿಗಳು, ಕಂಪ್ಯೂಟರ್‍ಗಳು, ಇನ್ನೋವಾ ಕಾರುಗಳು, ಕಚೇರಿಯ ಐಷಾರಾಮಿ ಒಳ ವಿನ್ಯಾಸ, ಜಾಹಿರಾತು, ಪ್ರಕಟಣೆ, ಸೋಫಾ, ಖುರ್ಚಿಗಳು ಇತ್ಯಾದಿಗಳ ಹೆಸರಿನಲ್ಲಿ ಮನಸೋಇಚ್ಛೆ ಖರ್ಚು ಮಾಡಿದರು. ಮುಂದುವರಿದು ಕಾರ್ಮಿಕರ ಹೆಸರಿನಲ್ಲಿ ಟೂಲ್ ಕಿಟ್, ರೇಷನ್ ಕಿಟ್, ಬೂಸ್ಟರ್ ಕಿಟ್ (ಆಯುರ್ವೇದ ಪೌಡರ್) ಸ್ಕೂಲ್ ಕಿಟ್, ಲ್ಯಾಪ್ಟಾಪ್, ಟ್ಯಾಬ್, ವೈದ್ಯಕೀಯ ತಪಾಸಣೆ, ಆಂಬ್ಯೂಲೆನ್ಸ್, ಕ್ರೀಚ್, ಇತ್ಯಾದಿಗಳಿಗೆ ಖರ್ಚು ಮಾಡಿ ನಿಧಿಯನ್ನು ಅರ್ಧಕ್ಕೆ ಇಳಿಸಿದರು. ಸಾವಿರಾರು ಕೋಟಿ ರೂಪಾಯಿ ಭ್ರμÁ್ಟಚಾರ ನಡೆಯಿತು, ಕಾರ್ಮಿಕ ಸಂಘಟನೆಗಳಿಂದ ಬೃಹತ್ ಹೋರಾಟಗಳು ನಡೆದವು ಎಂದರು. ಹೈಕೋರ್ಟ್
ಆದರೆ ಬಳಿಕ ಅಧಿಕಾರವಹಿಸಿಕೊಂಡ ಕಾಂಗ್ರಸ್ ಸರ್ಕಾರದ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ ಖರೀದಿಗಳನ್ನು ನಿಲ್ಲಿಸಿ ಕಾರ್ಮಿಕರಿಗೆ ಆಃಖಿ ಮೂಲಕ ಸೌಲಭ್ಯ ವಿತರಿಸಿ ಎಂದು ಹೆಸರಿಗಷ್ಟೇ ಘೊಷಿಸಿದ್ದರು. ಬಳಿಕ ಕಾರ್ಮಿಕರ ಹೆಸರಲ್ಲಿ ಮತ್ತೆ ಲ್ಯಾಪ್‍ಟಾಪ್ ಖರೀದಿ, ಖಾಸಗಿ ಆಸ್ಪತ್ರೆಗಳಿಂದ ವೈದ್ಯಕೀಯ ತಪಾಸಣೆ, ಪೌಷ್ಟಿಕಾಂಶ ಕಿಟ್ ಖರೀದಿ (ಆಯುರ್ವೇದ ಪೌಡರ್) ಇತ್ಯಾದಿಗಳ ಮೂಲಕ ಈಗಾಗಲೇ ನೂರಾರು ಕೋಟಿ ರೂಪಾಯಿ ಅನಗತ್ಯ ಖರ್ಚು ಮಾಡುತ್ತಿದ್ದಾರೆ. ಹತ್ತಾರು ವರ್ಷ ಕಾನೂನು ಜಾರಿಗಾಗಿ ಬಳಿಕ ಕಲ್ಯಾಣ ಮಂಡಳಿ ರಚನೆಗಾಗಿ ಹೋರಾಟ ನಡೆಸಿದ ಕಾರ್ಮಿಕ ಸಂಘಟನೆಗಳನ್ನು ಕಾರ್ಮಿಕ ಸಚಿವರು,ಅಧಿಕಾರಿಗಳು ಉದ್ದೇಶಪೂರ್ವಕವಾಗಿ ದೂರವಿಟ್ಟಿದ್ದಾರೆ. ಕಲ್ಯಾಣ ಮಂಡಳಿ ಸಭೆ ನಡೆಸದೇ ಬೇಕಾಬಿಟ್ಟಿ ತೀರ್ಮಾನ ಕೈಗೊಳ್ಳುತ್ತಿದ್ದಾರೆ. ಕಾರ್ಮಿಕರು ಸಲ್ಲಿಸಿದ ಮನವಿ, ಹೋರಾಟಕ್ಕೂ ಕಿವಿಗೊಡುತ್ತಿಲ್ಲ ಎಂದು ಹೇಳಿದರು. ಹೈಕೋರ್ಟ್
ಈ ಹಿನ್ನಲೆಯಲ್ಲಿ ಎಲ್ಲ ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ಸಂಯೋಜನೆ ಗೊಂಡಿರುವ ಕಟ್ಟಡ ಕಾರ್ಮಿಕ ಸಂಘಗಳು ಕಟ್ಟಡ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರದ ಮುಂದೆ ಮಂಡಿಸಲು ಆಗಸ್ಟ್ 5, 2024 ರಂದು ಮುಖ್ಯಮಂತ್ರಿ ಮನೆ ಚಲೋ ಹೋರಾಟವನ್ನು ಹಮ್ಮಿಕೊಂಡಿದೆ ಎಂದರು.
ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ, ಪಿ.ಪಿ ಅಪ್ಪಣ್ಣ, ಲೀಲಾವತಿ ಎನ್,ಪಿ ಸಾಮಿ, ಗಿರೀಶ್, ಯಲ್ಲಪ್ಪ ಸೇರಿದಂತೆ ಅನೇಕರಿದ್ದರು.
ಇದನ್ನೂ ನೋಡಿ: ಕಟ್ಟಡ ಕಾರ್ಮಿಕರ ಹಣಕ್ಕೆ ಕನ್ನ?! ಏನಾಗ್ತಿದೆ ಕಲ್ಯಾಣ ಮಂಡಳಿಯಲ್ಲಿ